Friday, October 25, 2024

ಪ್ರಾಯೋಗಿಕ ಆವೃತ್ತಿ

ಹರಿಯಾಣ| ಕಾಂಗ್ರೆಸ್ ಅಭ್ಯರ್ಥಿ, ಕುಸ್ತಿಪಟು ವಿನೇಶ್ ಪೋಗಟ್ ಜಯಭೇರಿ

ಹರಿಯಾಣದ ಜೂಲಾನಾ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ 6 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕದಿಂದ ವಂಚಿತಗೊಂಡಿದ್ದ ಅಂತಾರಾಷ್ಟ್ರೀಯ ಕುಸ್ತಿಪಟು ವಿನೇಶ್ ಫೋಗಟ್ ನಂತರ ಕಾಂಗ್ರೆಸ್‌ಗೆ ಸೇರಿ ಹರಿಯಾಣದ ಜೂಲಾನಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಮತ ಎಣಿಕೆ ಪ್ರಕ್ರಿಯೆಯಲ್ಲಿ ಆರಂಭದಿಂದಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದರು.

ವಿನೇಶ್ ಫೋಗಟ್ ಬಿಜೆಪಿ ಅಭ್ಯರ್ಥಿ ಯೋಗೀಶ್ ಬೈರಾಗಿ ಅವರ ವಿರುದ್ಧ 6 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!