Wednesday, November 18, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ನಾಲ್ವರು ದುಷ್ಕರ್ಮಿಗಳಿಂದ ರೌಡಿ ಶೀಟರ್ ವಿನೋದ್ ಕೊಲೆ

ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಾಲ್ವರು ದುಷ್ಕರ್ಮಿಗಳು ವಿನೋದ್ ಆಲಿಯಾಸ್ ಕುಂಟ ವಿನು (32) ಎಂಬಾತನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಸೋಮವಾರ ಬೆಳಗ್ಗೆ ನಡೆಸಿದೆ.

ಮಾರುತಿ ಓಮಿನಿ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು, ಕಾರಿನಿಂದ ಸ್ಕೂಟರ್ ಗೆ ಡಿಕ್ಕಿ ಹೊಡೆಸಿ, ವಿನೋದನ ಮೇಲೆ ದಾಳಿ ನಡೆಸಿ ಮಾರಕಾಯುಧಗಳಿಂದ ಕೊಚ್ಚಿನ ಕೊಲೆ ಮಾಡಿದ್ದಾರೆ.

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಸ್ನೇಹಿತರೇ ಕೂಡಿ ಈತನನ್ನು ಹತ್ಯೆ ಮಾಡಿದ್ದಾರೆಂದು ತಿಳಿದು ಬಂದಿದೆ, ಕಳೆದ ಒಂದು ತಿಂಗಳ ಹಿಂದೆ ವಿನೋದ್ ಗಲಾಟೆಯೊಂದರಲ್ಲಿ ಭಾಗಿಯಾಗಿದ್ದ, ಇದರ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ.

ಶ್ರೀರಂಗಪಟ್ಟಣ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ