Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| 36 ಬಾರಿ ಸಂಚಾರಿ ನಿಯಮ ಉಲ್ಲಂಘನೆ ; ಚಾಲಕನಿಗೆ 18,000 ಸಾವಿರ ದಂಡ !

ಸೀಟ್ ಬೆಲ್ಟ್ ಧರಿಸದೇ ಪದೇ ಪದೇ 36 ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದ ಗೂಡ್ಸ್ ವಾಹನದ ಚಾಲಕನಿಗೆ ಮಂಡ್ಯದ ಸಂಚಾರಿ ಪೊಲೀಸರು ಬರೋಬರಿ 18 ಸಾವಿರ ರೂ. ದಂಡ ವಿಧಿಸಿದ್ದಾರೆ.

ಮೈಸೂರು ನಗರದ ನೋಂದಣಿ ಹೊಂದಿದ್ದ ಗೂಡ್ಸ್ ವಾಹನದ ಮೂಲಕ ಗ್ಯಾಸ್ ಸಿಲಿಂಡರ್ ಗಳನ್ನು ಸರಬರಾಜು ಮಾಡಲಾಗುತ್ತಿತ್ತು. ಚಾಲಕ ಪ್ರತಿ ಬಾರಿಯು ವಾಹನ ಚಲಾಯಿಸುವ ಸಂದರ್ಭದಲ್ಲಿ 36 ಬಾರಿಯೂ ಸೀಟ್ ಬೆಲ್ಟ್ ಹಾಕದೇ ಇರುವುದು, ಮಂಡ್ಯದ ಸಿ.ಸಿ.ಕ್ಯಾಮೆರಾಗಳಲ್ಲಿ ದಾಖಲಾಗಿತ್ತು.

“>

 

ಒಂದು ಬಾರಿಯ ನಿಯಮ ಉಲ್ಲಂಘನೆಗೆ ತಲಾ 500 ರೂ. ದಂಡದಂತೆ 36 ಬಾರಿಯ ಉಲ್ಲಂಘನೆಗೆ ಒಟ್ಟು 18,000 ಸಾವಿರ ರೂ. ದಂಡವನ್ನು ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚಾಲಕ ಮಂಗಳವಾರ 18 ಸಾವಿರ ರೂ. ದಂಡ ಪಾವತಿಸಿ, ರಶೀದಿ ಪಡೆದಿದ್ದಾರೆಂದು ಮಂಡ್ಯ ಟ್ರಾಫಿಕ್ ಪೊಲೀಸ್ ಇನ್ಸ್ ಪೆಕ್ಟರ್ ಸಂತೋಷ್ ಅವರು ನುಡಿಕರ್ನಾಟಕ.ಕಾಂ ಗೆ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ದಂಡ ತೆತ್ತ ಚಾಲಕನಿಗೆ ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿ, ಸಂಚಾರಿ ನಿಯಮಗಳನ್ನು ಪಾಲಿಸಿ, ರಸ್ತೆಯಲ್ಲಿ ಜಾಗರೂಕತೆಯಿಂದ ವಾಹನ ಚಲಾಯಿಸುವಂತೆ ತಿಳಿವಳಿಕೆ ನೀಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ