Thursday, September 19, 2024

ಪ್ರಾಯೋಗಿಕ ಆವೃತ್ತಿ

ವೀರೇಂದ್ರ ಹೆಗ್ಗಡೆ ಅವರಿಗೆ ಭಾರತ ರತ್ನ ನೀಡಲು ಸಚ್ಚಿದಾನಂದ ಆಗ್ರಹ

ಗ್ರಾಮೀಣಾಭಿವೃದ್ಧಿಗಾಗಿ ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ದುಡಿಯುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಬಿಜೆಪಿ ಯುವ ಮುಖಂಡ ಇಂಡುವಾಳು ಸಚ್ಚಿದಾನಂದ ಆಗ್ರಹಿಸಿದರು.

ಮಂಡ್ಯ ತಾಲ್ಲೂಕಿನ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇವಿನಹಳ್ಳಿ ಗ್ರಾಮದ ಸೋಮೇಶ್ವರ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಒಕ್ಕೂಟ ಪದಗ್ರಹಣ ಸಮಾರಂಭ ಹಾಗೂ ಸತ್ಯನಾರಾಯಣ ಪೂಜೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ದಕ್ಷಿಣ ಕನ್ನಡದಲ್ಲಿ ಜನಿಸಿದ ಡಾ.ವೀರೇಂದ್ರ ಹೆಗ್ಗಡೆ ಅವರು ರಾಜ್ಯದ ಗ್ರಾಮೀಣಾಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ರಾಜ್ಯಸಭಾ ಸದಸ್ಯರನ್ನಾಗಿ ಮಾಡಲಾಗಿದೆ. ಇದರಿಂದಾಗಿ ಚಿಂತಕರ ಚಾವಡಿ ಎನ್ನಿಸಿಕೊಂಡಿರುವ ರಾಜ್ಯಸಭೆಗೆ ಶೋಭೆ ಬಂದಂತಾಗಿದೆ. ಧರ್ಮಸ್ಥಳ ಇಂದು ವಿಶ್ವವಿಖ್ಯಾತಿ ಪಡೆದಿದೆ. ಆದ್ದರಿಂದ ಕೇಂದ್ರ ಸರ್ಕಾರ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದರು.

ಬೇವಿನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಸಿ.ಯೋಗೇಶ್, ಸದಸ್ಯ ಬಿ.ಎಂ.ಮಹೇಶ್, ಟ್ರಸ್ಟ್‌ನ ನಿರ್ದೇಶಕಿ ಎಂ.ಚೇತನಾ, ನಿರ್ಮಲಾ, ಡಾ.ಮಂಜೇಶ್‌ಗೌಡ, ಸೋಮಶಂಕರೇಗೌಡ, ಅಭಿಷೇಕ್, ಮಾಯಣ್ಣ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!