Friday, September 20, 2024

ಪ್ರಾಯೋಗಿಕ ಆವೃತ್ತಿ

ರಘು ಆಚಾರ್ ವಿರುದ್ಧ ಅಪಪ್ರಚಾರ : ವಿಶ್ವಕರ್ಮ ಮುಖಂಡರ ಖಂಡನೆ 

ಹಿಂದುಳಿದ ವರ್ಗದ ವಿಶ್ವಕರ್ಮ ಸಮುದಾಯದ ಜಿ. ರಘು ಆಚಾರ್‌ ಅವರ ವಿರುದ್ಧ ಕೆಲವು ಕಿಡಿಕೇಡಿಗಳು ಷಡ್ಯಂತ್ರ ಮಾಡುತ್ತಿದ್ದು, ಇದು ಖಂಡನೀಯ ಎಂದು ಮಂಡ್ಯ ಜಿಲ್ಲಾ ವಿಶ್ವಕರ್ಮ ಸಮಾಜ ಸೇವಾ ಟ್ರಸ್ಟ್ ನ ಮುಖಂಡ ಪ್ರಕಾಶ್ ಖಂಡಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ಜಿ.ರಘು ಆಚಾರ್‌ ಸತತ 2 ಬಾರಿ ವಿಧಾನಸಭಾ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿ  ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಅವರು ಲಿಂಗಾಯತ ಸಮುದಾಯದ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ವಿಚಾರವಾಗಿದೆ ಎಂದರು.

ರಘು ಆಚಾರ್‌ ಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸುವ ಸಲುವಾಗಿ ವ್ಯವಸ್ಥಿತವಾಗಿ ಸಂಚು ರೂಪಿಸಿ ಅವರ ವಿರುದ್ಧ ಒಂದು ಪ್ರಬಲ ಸಮುದಾಯದ ಕೆಲ ಬೆರಳೆಣಿಕೆ ವ್ಯಕ್ತಿಗಳು ಜಾತಿಯ ಜನರನ್ನು ಎತ್ತಿಕಟ್ಟಲು ಪ್ರಯತ್ನಿಸುತ್ತಿರುವುದು ಮತ್ತು ತೇಜೋವಧೆ ಮಾಡುತ್ತಿರುವುದು ಖಂಡನೀಯ. ಕಾಂಗ್ರೆಸ್ ವರಿಷ್ಟರು ಇಂತಹ ಅಪಪ್ರಚಾರಗಳಿಗೆ ಕಿವಿಗೊಡದೇ ರಘು ಆಚಾರ್‌ರವರಿಗೆ ಪಕ್ಷದ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.

ಗೋ‍ಷ್ಠಿಯಲ್ಲಿ ಟ್ರಸ್ಟ್ ನ ಅಧ್ಯಕ್ಷ ಹೆಚ್.ಪಿ.ಸತೀಶ್, ಉಪಾಧ್ಯಕ್ಷ ದೇವರಾಜು, ಕಾರ್ಯದರ್ಶಿ ವಿ.ಪ್ರಕಾಶ್, ಮುಖಂಡರಾದ ಮಹೇಶ್, ನಾರಾಯಣ್, ಕುಮಾರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!