Thursday, September 19, 2024

ಪ್ರಾಯೋಗಿಕ ಆವೃತ್ತಿ

ಆ.27ಕ್ಕೆ ವಿಶ್ವಕರ್ಮ ಸೇವಾ ಟ್ರಸ್ಟ್ ವಾರ್ಷಿಕೋತ್ಸವ – ಪ್ರತಿಭಾ ಪುರಸ್ಕಾರ

ವಿಶ್ವಕರ್ಮ ಸೇವಾ ಟಸ್ಟ್ ವಾರ್ಷಿಕೋತ್ಸವ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಆ.27ರಂದು ಆಗಸ್ಟ್ 27ರಂದು ಮಧ್ಯಾಹ್ನ 12ಗಂಟೆಗೆ ಮೈಸೂರಿನ ಮೆಡಿಕಲ್‌ ಕಾಲೇಜಿನ ಪ್ಲಾಟಿನಂ ಜ್ಯುಬಿಲಿ ಆಡಿಟೋರಿಯಂ ಜೆ.ಕೆ. ಗೌಂಡ್ ನಲ್ಲಿ ನಡೆಯಲಿದೆ ಎಂದು ಮಂಡ್ಯ ಜಿಲ್ಲಾ ವಿಶ್ವಕರ್ಮ ಸಮಾಜ ಸೇವಾ ಟ್ರಸ್ಟ್ ಮುಖಂಡ ಹೆಚ್.ಪಿ ಸತೀಶ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2022-23ನೇ ಸಾಲಿನಲ್ಲ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 85% ಅಂಕ ಗಳಿಸಿರುವ ವಿಶ್ವಕರ್ಮ ಸಮುದಾಯದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದರು.

ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತುಮಕೂರಿನ ನಿಟ್ಟರಹಳ್ಳಿಯ ವಿಶ್ವಕರ್ಮ ಮಹಾಸಂಸ್ಥಾನದ ಶ್ರೀ ನೀಲಕಂಠಚಾರ್ಯ ಮಹಾಸ್ವಾಮಿಗಳವರು ವಹಿಸುತ್ತಿದ್ದು, ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಈಶ್ವರ್ ಖಂಡ್ರೆ, ಹೆಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್‌ ಸೇರಿದಂತೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಭಾಗವಹಿಸುವರು ಎಂದರು.

ವಿಶೇಷ ಆಹ್ವಾನಿತರಾಗಿ ಸರಿಗಮಪ ಕಾರ್ಯಕ್ರಮದ ವಿಜೇತೆ ಕುಮಾರಿ ಪ್ರಗತಿ ಬಡಿಗೇರ್ ಮತ್ತು ಮಹಾಭಾರತ ಖ್ಯಾತಿಯ ಹಾಸ್ಯನಟರಾದ ವಿನೋದ್ ಗೊಬ್ಬರಗಾಲ ಆಗಮಿಸುವರು. ಆದ್ದರಿಂದ ಈ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ವಿಶ್ವಕರ್ಮ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಮುಖಂಡರಾದ ವಿ.ಪ್ರಕಾಶ್, ದೇವರಾಜಚಾರ್, ಎಂ.ಎನ್.ಕುಮಾರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!