Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾವೇರಿಯಲ್ಲಿ ಪ್ರವಾಹ| ಮುತ್ತತ್ತಿಗೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಕೆ.ಆರ್.ಎಸ್ ಅಣೆಕಟ್ಟೆಯಿಂದ 50 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವುದರಿಂದ ಕಾವೇರಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸೋಮವಾರ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುತ್ತತ್ತಿ ಭಾಗದಲ್ಲಿ ಪ್ರವಾಸಿಗರು ಹೆಚ್ಚು ಭೇಟಿ ನೀಡುತ್ತಾರೆ. ನದಿ ತೀರದಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕೆ.ಆರ್.ಎಸ್ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಮಾಡುತ್ತಿರುವ ಹಿನ್ನಲೆಯಲ್ಲಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರು ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಿದರು.

ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿಯ ಒಳಗೆ ಇಳಿಯುವುದು, ಸೆಲ್ಫಿ ತೆಗೆದುಕೊಳ್ಳುವುದು ಮುಂತಾದ ಪ್ರಕ್ರಿಯೆಗಳಿಗೆ ಕೈಹಾಕಿ ಜೀವಕ್ಕೆ ತೊಂದರೆ ಮಾಡಿಕೊಳ್ಳಬೇಡಿ. ಜಿಲ್ಲಾಡಳಿತದಿಂದ ಎಚ್ಚರಿಕೆ ಫಲಕಗಳನ್ನು ಅಳವಡಿಸಿದ್ದು, ಅವುಗಳನ್ನು ಪಾಲಿಸಿ ಎಂದರು‌.

ಪರಿಶೀಲನೆ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ‌ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!