Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಿಮ್ಸ್ ಆಸ್ಪತ್ರೆಗೆ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಭೇಟಿ: ಗಾಯಾಳುಗಳ ಆರೋಗ್ಯ ವಿಚಾರಣೆ

ಅಪಘಾತದಲ್ಲಿ ಗಾಯಗೊಂಡು ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.

ಕೆಲ ದಿನಗಳ ಹಿಂದೆ ಮದುವೆಗೆ ತೆರಳುತ್ತಿದ್ದ ಮಳವಳ್ಳಿ ಕ್ಷೇತ್ರದ ಹಲವು ಮಂದಿ ಅಪಘಾತದಲ್ಲಿ ಗಾಯಗೊಂಡಿದ್ದರು.ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಬಂದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ವಿವಿಧ ವಾರ್ಡ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕ್ಷೇತ್ರದ ಜನರ ಆರೋಗ್ಯ ವಿಚಾರಿಸಿ,ಮಿಮ್ಸ್ ವೈದ್ಯರಿಂದ ಚಿಕಿತ್ಸೆಯ ಮಾಹಿತಿ ಪಡೆದರು.
ಗಾಯಾಳುಗಳಿಗೆ ಇನ್ನೂ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನರೇಂದ್ರಸ್ವಾಮಿ, ಕಳೆದ ಕೆಲ ದಿನಗಳ ಹಿಂದೆ ಮದುವೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಡೆದ ಅಪಘಾತದಲ್ಲಿ ನನ್ನ ಕ್ಷೇತ್ರದ ಹಲವರು ಗಾಯಗೊಂಡಿದ್ದರು. ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಕೆಲವರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ.ಇನ್ನು ಕೆಲವರಿಗೆ ಮೂಳೆ ಚಿಕಿತ್ಸೆ ಮಾಡಬೇಕಿದೆ‌. ಅವರ ಗಾಯ ವಾಸಿಯಾದ ನಂತರ ಶಸ್ತ್ರಚಿಕಿತ್ಸೆ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ. ವೈದ್ಯರು ಎಲ್ಲರಿಗೂ ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ ಎಂದರು.

ಈಗಾಗಲೇ ಅಪಘಾತದಲ್ಲಿ ಮೃತಪಟ್ಟವರಿಗೆ ಸರ್ಕಾರದಿಂದ ಹಾಗೂ ವೈಯಕ್ತಿಕವಾಗಿ ಪರಿಹಾರ ನೀಡಲಾಗಿದೆ‌.ಗಾಯಾಳುಗಳಿಗೆ ಇನ್ನೂ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಮಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಪಿ.ವಿ.ಶ್ರೀಧರ್, ಮಳವಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜ್, ಯುವ ಕಾಂಗ್ರೆಸ್ ಅಧ್ಯಕ್ಷ ತಳಗವಾದಿ ವಿಶ್ವ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!