Friday, September 20, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ನಾಯಕರಿಂದ ಎಸ್.ಎಂ ಕೃಷ್ಣ ಭೇಟಿ| ಕೃಷ್ಣಾಶೀರ್ವಾದ ಪಡೆದ ಸ್ಟಾರ್ ಚಂದ್ರು

ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ಗಣಿಗ ರವಿ, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ವಿಧಾನ ಪರಿಷತ್ ಮಾಜಿ ಸದಸ್ಯರಾದ  ಬಿ.ರಾಮಕೃಷ್ಣ, ಮರಿತಿಬ್ಬೇಗೌಡ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ. ಎಸ್. ಚಿದಂಬರ್ ಅವರು ಸದಾಶಿವ ನಗರದಲ್ಲಿನ ಎಸ್.ಎಂ.ಕೃಷ್ಣ ಅವರ ನಿವಾಸದಲ್ಲಿ ಭೇಟಿ ಮಾಡಿ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.

ಎಸ್.ಎಂ.ಕೃಷ್ಣ ಅವರಿಗೆ ಹೂಮಾಲೆ ಹಾಕಿ, ಶಾಲು ಹೊದಿಸಿ ಸನ್ಮಾನಿಸಿದರು. ಉಭಯ ಕುಶಲೋಪರಿ ವಿಚಾರಿಸಿದ ನಾಯಕರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!