ಚಾಲಕನ ನಿಯಂತ್ರಣ ತಪ್ಪಿ ಮದ್ದೂರು ಬಳಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿಂದು KSRTC ಬಸ್ ಪಲ್ಟಿಯಾಗಿರುವ ಸ್ಥಳಕ್ಕೆ ಕೃಷಿ ಹಾಗೂ ಮಂಡ್ಯ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯರಿಂದ ಮಾಹಿತಿ ಪಡೆದರು. ಗಾಯಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ನಿರ್ದೇಶನ ನೀಡಿದರು.
ಮಂಡ್ಯದ ಮದ್ದೂರು ತಾಲೂಕಿನ ನಿಢಘಟ್ಟ ಬಳಿಯ ಹಳೇ ಮೈ – ಬೆಂ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ರೋಡ್ ಡಿವೈಡರ್ ಗೆ ಡಿಕ್ಕಿಯಾಗಿ ಬಸ್ ಪಲ್ಟಿಯಾಗಿದೆ. ಗಾಯಗೊಂಡ ಪ್ರಯಾಣಿಕರಿಗೆ ಮದ್ದೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,
ಗಂಭೀರ ಗಾಯಗಳಾಗಿರುವ ಇಬ್ಬರು ಬಸ್ ಪ್ರಯಾಣಿಕರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.




