Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜ.6ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ: ಅನ್ಬುಕುಮಾರ್

ಚುನಾವಣಾ ಆಯೋಗದ ನಿರ್ದೇಶನದಂತೆ 01-01-2025 ಕ್ಕೆ ಕೈಗೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆಯ ಅಂತಿಮ ಮತದಾರರ ಪಟ್ಟಿಯನ್ನು ಜನವರಿ 6 ರಂದು ಪ್ರಕಟಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರು ವಿ ಅನ್ಬುಕುಮಾರ್ ತಿಳಿಸಿದರು

ಇಂದು ಮಂಡ್ಯ ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಸಭೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್, ಅಪರ ಜಿಲ್ಲಾಧಿಕಾರಿ ಬಿ ಸಿ ಶಿವಾನಂದಮೂರ್ತಿ, ಉಪ ವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ