Wednesday, November 18, 2026

ಪ್ರಾಯೋಗಿಕ ಆವೃತ್ತಿ

ಸಿದ್ದರಾಮನಹುಂಡಿಯಲ್ಲಿ ಸಿದ್ದರಾಮಯ್ಯ, ಕೇತಿಗಾನಹಳ್ಳಿಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮತದಾನ

ವರುಣ ವಿಧಾನಸಭಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕೇತಿಗಾನಹಳ್ಳಿಯಲ್ಲಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಇಂದು ಮತ ಚಲಾಯಿಸಿದರು.

“>

ಮತದಾನ ಗಣತಂತ್ರದ ಹಬ್ಬ, ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಬುನಾದಿಯನ್ನು ಸದೃಢಗೊಳಿಸೋಣ. ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ, ಕೋಮುವಾದ, ಬೆಲೆ ಏರಿಕೆಗಳ ವಿರುದ್ಧ ವರುಣಾ ವಿಧಾನಸಭಾ ಕ್ಷೇತ್ರದ ನನ್ನ ಹುಟ್ಟೂರು ಸಿದ್ದರಾಮನಹುಂಡಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದೆ. ನೀವೂ ತಪ್ಪದೆ ಮತದಾನ ಮಾಡಿ, ಕರ್ನಾಟಕವನ್ನು ಗೆಲ್ಲಿಸಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

“>

ಬಿಡದಿ ಪುರಸಭೆ ವ್ಯಾಪ್ತಿಯ ಕೇತಿಗಾನಹಳ್ಳಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದೆ. ಕುಟುಂಬ ಸಮೇತವಾಗಿ ಬಂದು ಮತದಾನ ಮಾಡಿದ್ದು ಸಂತಸ ಉಂಟು ಮಾಡಿದೆ. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಿ, ಪ್ರಜಾಪ್ರಭುತ್ವವನ್ನು ಗೆಲ್ಲಿಸಿ ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ಟಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ