Thursday, September 19, 2024

ಪ್ರಾಯೋಗಿಕ ಆವೃತ್ತಿ

ಮತದಾನ ಮಾಡುವ ಮೂಲಕ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕರೆ

18 ವರ್ಷ ತುಂಬಿದ ಯುವಕ-ಯುವತಿಯರು ಸಾರ್ವತ್ರಿಕ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸದೃಢ ದೇಶ ನಿರ್ಮಾಣ ಮಾಡಬೇಕೆಂದು ಮೈಸೂರು ವಿಭಾಗಿಯ ಉಪನಿರ್ದೇಶಕ ಡಾ.ಎಂ.ಸಿ.ರವಿ ಮನವಿ ಮಾಡಿದರು.

ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಸಾರ್ವಜನಿಕ ಆಸ್ಪತ್ರೆ ವತಿಯಿಂದ ಆಯೋಜಿಸಿದ್ದ “ರಾಷ್ಟ್ರೀಯ ಮತದಾರರ ದಿನ” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

nudikarnataka.com

ಪ್ರತಿ ವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತಿದ್ದು, ಚುನಾವಣೆ ಪ್ರಕ್ರಿಯೆಯಲ್ಲಿ ಹೊಸ ಮತದಾರರನ್ನು, ಯುವಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ “ಮತದಾನಕ್ಕಿಂತ ಮುಖ್ಯ ಇನ್ನೊಂದಿಲ್ಲ,ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಘೋಷವಾಕ್ಯದೊಂದಿಗೆ ಮತದಾರರ ಜಾಗೃತಿ ದಿನ ಆಚರಿಸಲಾಗುತ್ತಿದೆ ಎಂದರು.

ನಂತರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಎನ್.ಕೆ‌. ವೆಂಕಟೇಶ್, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪಿ. ಮಾರುತಿ, ಮೈಸೂರ ವಿಭಾಗೀಯ ಸಹ ನಿರ್ದೇಶಕರ ಕಚೇರಿಯ ಮುಖ್ಯ ಆರೋಗ್ಯ ಮೇಲ್ವಿಚಾರಣಾಧಿಕಾರಿ ಜೆ. ಎಚ್. ಶಿವಣ್ಣ ,ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ. ಮೋಹನ್ , ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ್ ಹಾಗೂ ಶುಶ್ರೂಷಣಾಧಿಕಾರಿಗಳು, ಅಧಿಕಾರಿಗಳು, ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!