Friday, June 21, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮನೆಯಿಂದಲೇ ಮತದಾನ; ಗೌಪ್ಯತೆ ಕಾಪಾಡಲು ಜಿಲ್ಲಾಧಿಕಾರಿ ಸೂಚನೆ

ಮನೆಯಿಂದಲೇ ಮತದಾನ ಮಾಡಲು ಆಯ್ಕೆ ಮಾಡಿಕೊಂಡಿರುವ 85 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನರಿಗೆ ಏಪ್ರಿಲ್ 16, 17 ಹಾಗೂ 18 ರಂದು ಮತದಾನ ನಡೆಯಲಿದೆ. ಮತದಾನ ಕೆಲಸದಲ್ಲಿ ಭಾಗವಹಿಸುವ ಪಿ.ಆರ್.ಒ ಮತ್ತು ಎ.ಪಿ.ಆರ್.ಒ ಗಳು ಮತದಾನದ ಗೌಪ್ಯತೆಯನ್ನು ಕಾಪಾಡುವುದು ಅತಿ ಮುಖ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ಮಂಡ್ಯನಗರದ ಅಂಬೇಡ್ಕರ್ ಭವನದಲ್ಲಿ ಮನೆಯಿಂದ ಅಂಚೆ ಮತದಾನ ಕುರಿತು ಪಿ.ಆರ್.ಒ ಮತ್ತು ಎಪಿಆರ್’ ಒ‌ಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮತದಾನ ಗೌಪ್ಯತೆ ಕಾಪಡದಿದ್ದರೆ. ಆರ್.ಪಿ. ಆಕ್ಟ್ 128 ರಡಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಂಚೆ ಮತದಾನ ಕುರಿತಂತೆ ತರಬೇತಿ ಹಾಗೂ ಅನುಸರಿರಬೇಕಾದ ಕ್ರಮಗಳ ಬಗ್ಗೆ ಮಾಹಿತಿಯುತ ಪುಸ್ತಕ ನೀಡಲಾಗಿದೆ. ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಎಂದರು.

ಅಂಚೆ ಮತದಾನ ಮಾಡುವ ಸಂದರ್ಭದಲ್ಲಿ ಮತಪತ್ರಗಳು ಅಧಿಕಾರಿ ಅಥವಾ ಸಿಬ್ಬಂದಿಯ ತಪ್ಪಿನಿಂದ ಮತಪತ್ರ ತಿರಸ್ಕಾರವಾಗಬಾರದು. ಅದು ಕಂಡುಬಂದಲ್ಲಿ ಶಿಸ್ತು ಕ್ರಮವಹಿಸುವುದಾಗಿ ಎಚ್ಚರಿಕೆ ನೀಡಿದರು.

ಸಮರ್ಪಕವಾಗಿ ನಿರ್ವಹಿಸಬೇಕು

ಮತದಾನಕ್ಕೆ ಬೇಕಾದ ಎಲ್ಲಾ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಚುನಾವಣಾ ಆಯೋಗ ನೀಡಿರುವ ಸೂಚನೆಗಳನ್ವಯ ನಿಗದಿತ ಕಾಲಾವಧಿಯಲ್ಲಿ ಯಾವುದೇ ಲೋಪಕ್ಕೆ ಅವಕಾಶ ಕೊಡದೆ ಚುನಾವಣಾ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಇದಕ್ಕೆ ಸಹಕಾರಿಯಾಗುವಂತೆ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯಲ್ಲಿ ಯಾವುದೇ ಗೊಂದಲಗಳಿದ್ದರೂ ಪರಿಹರಿಸಿಕೊಳ್ಳಬಹುದು. ಕೂಲಂಕಷವಾಗಿ ತರಬೇತುದಾರರು ನೀಡುವ ಮಾಹಿತಿಗಳನ್ನು ಸರಿಯಾಗಿ ಗ್ರಹಿಸಿ ಅದರಂತೆ ತಮ್ಮ ಕಾರ್ಯ ಕ್ಷೇತ್ರದಲ್ಲಿ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಅಂಚೆ ಮತದಾನದ ಸಂದರ್ಭದಲ್ಲಿ ಯಾವುದೇ ಭಯದ ವಾತಾವರಣವಿರುವುದಿಲ್ಲ. ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ. ಮತಪತ್ರವನ್ನು ಜಾಗರೂಕತೆಯಿಂದ ತಿಳಿಸಿರುವ ರೀತಿ ಮಡಿಕೆ ಮಾಡಿ ಮತದಾರರಿಗೆ ನೀಡಿ ಅವರು ಮತದಾನದ ನಂತರ ಅದೇ ರೀತಿ ಫೋಲ್ಡ್ ಹಾಗೂ ಕವರ್ ಮಾಡಲಿ ಎಂದು ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಅವರು ತಿಳಿಸಿದರು.

ಮತದಾನದ ಸಂದರ್ಭದಲ್ಲಿ ಮನೆ ಯಲ್ಲಿ ಇರುವ ಇತರರು ಮತದಾನವನ್ನು ನೋಡಲು ಪ್ರಯತ್ನಿಸುತ್ತಾರೆ. 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಾಗಿದ್ದು, ಅವರಿಗೆ ಬೇಕಿರುವ ಎಲ್ಲಾ ಮಾಹಿತಿಯನ್ನು ನೀಡಿ ಮತದಾನದ ಸಂದರ್ಭದಲ್ಲಿ ಅವರನ್ನು ಹೊರತು ಪಡಿಸಿ ಎಲ್ಲರೂ ದೂರ ಇರುವಂತೆ ನೋಡಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!