Sunday, May 19, 2024

ಪ್ರಾಯೋಗಿಕ ಆವೃತ್ತಿ

ಲೋಕಸಭೆ ಚುನಾವಣೆ| ನಾಳೆ ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮೇ 7ರಂದು ಮಂಗಳವಾರ ನಡೆಯಲಿದ್ದು, ಕರ್ನಾಟಕವೂ ಸೇರಿದಂತೆ 11 ರಾಜ್ಯಗಳಲ್ಲಿ ಮಂಗಳವಾರ ಮತದಾರರು ಮತ ಚಲಾಯಿಸಲಿದ್ದಾರೆ.

ರಾಜ್ಯದ ಉತ್ತರ ಕರ್ನಾಟಕದ 14 ಕ್ಷೇತ್ರ ಸೇರಿದಂತೆ ಒಟ್ಟು 92 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹವನ್ನು ಮತದಾರರು ನಿರ್ಧರಿಸಲಿದ್ದಾರೆ. ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆದಿತ್ತು. ಉಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಾಳೆ ನಡೆಯುತ್ತಿದೆ.

ರಾಜ್ಯದ ಯಾವ ಕ್ಷೇತ್ರಗಳಿಗೆ ಚುನಾವಣೆ?

ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಿಕ್ಕೋಡಿ, ದಾವಣಗೆರೆ, ಧಾರವಾಡ, ಹಾವೇರಿ, ಕೊಪ್ಪಳ, ಗುಲ್ಬರ್ಗ, ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡ ಕ್ಷೇತ್ರಗಳಿಗೆ ಮಂಗಳವಾರ ಮತದಾನವಾಗಲಿದೆ.

ಯಾವುದಕ್ಕೆ ರಜೆ?

ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲ ಸರ್ಕಾರಿ ಕಚೇರಿಗಳಿಗೆ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೇ 7ರಂದು ರಜೆ ಘೋಷಿಸಲಾಗಿದೆ. ಬ್ಯಾಂಕುಗಳು, ಶಾಲೆ, ಕಾಲೇಜುಗಳಿಗೆ ಹಾಗೂ ರಜೆ
ಹೈಕೋರ್ಟ್ ನ್ಯಾಯಪೀಠಗಳಿಗೆ ರಜೆ ಇರುತ್ತದೆ.

ಯಾವುದು ಓಪನ್?‌

ಆಸ್ಪತ್ರೆ, ಅಂಗಡಿ ಮುಂಗಟ್ಟುಗಳು ತೆರೆದಿರುತ್ತವೆ. ಬಸ್, ರೈಲು ಇತ್ಯಾದಿ ಸಾರಿಗೆ ವಾಹನಗಳ ಸಂಚಾರ ಇರುತ್ತದೆ. ಖಾಸಗಿ ಸಂಸ್ಥೆಗಳು ತೆರೆದಿರುತ್ತವೆ.

ಮದ್ಯ ಮಾರಾಟ ನಿಷೇಧ

ಮೇ 5 ಸಂಜೆ 5 ಗಂಟೆಯಿಂದ ಮೇ 7ರ ಮಧ್ಯರಾತ್ರಿ 12ರವರೆಗೂ ಮದ್ಯ ಮಾರಾಟ, ವಿತರಣೆ, ಸಾಗಣೆ, ಸಂಗ್ರಹಣೆಯನ್ನು ನಿಷೇಧಿಸಲಾಗಿದೆ. ಕೆಲ ಸೂಕ್ಷ್ಮ ಮತಗಟ್ಟೆಗಳ ಬಳಿ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಮತದಾನದ ಸಮಯ

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 6ರ ವರೆಗೆ ನಡೆಯಲಿದೆ. ಸಂಜೆ 6 ಗಂಟೆಯ ಒಳಗೆ ಮತಗಟ್ಟೆಗೆ ಬಂದವರಿಗೆ 6ರ ನಂತರವೂ ಅವಕಾಶ ದೊರೆಯಲಿದೆ.

 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!