ಪ್ರಜಾಪ್ರಭುತ್ವದಲ್ಲಿ ಮತದಾರನೇ ನಿಜವಾದ ಪ್ರಭು ಪ್ರಜಾಪ್ರಭುತ್ವ ಜೀವಂತವಾಗಿ ಉಳಿಯಬೇಕೆಂದರೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಯ್ಯ ತಿಳಿಸಿದರು.
ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ, ಕಂದೇಗಾಲ, ಅಗಸನಪುರ, ಹುಸ್ಕೂರು, ಯತ್ತಂಬಾಡಿ ಮತ್ತು ಹಲಗೂರು ಗ್ರಾಮ ಪಂಚಾಯತಿ ವರೆಗಿನ ಬೈಕ್ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮತದಾನ ನಮಗೆ ಸಂವಿಧಾನಾತ್ಮಕವಾಗಿ ದೊರೆತಿರುವ ಹಕ್ಕು ಮೇ 10 ರಂದು ಕರ್ನಾಟಕ ವಿಧಾನ ಸಭೆಗೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಗೆ ಪ್ರಭಾವಿತರಾಗದೇ ವಿವೇಚನೆಯಿಂದ ಮತ ಚಲಾಯಿಸಿ, ಆ ಮುಖಾಂತರ ಪ್ರಜಾಪ್ರಭುತ್ವವನ್ನು ಗೆಲ್ಲಿಸೋಣ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಸಲಹೆ ನೀಡಿದರು.
ಪಿಡಿಒ ರುದ್ರಯ್ಯ ಮಾತನಾಡಿ, ರವರು 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮತದಾನ ಜಾಗೃತಿ ಜಾಥಾದಂತಹ ಅನೇಕ ಕಾರ್ಯಕ್ರಮಗಳನ್ನು ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲರೂ ಕಡ್ಡಾಯವಾಗಿ ನಿರ್ಭೀತಿಯಿಂದ ಮತ ಚಲಾಯಿಸಿ ಎಂದರು.
ಜಿ.ಪಂ. ಸಹಾಯಕ ಕಾರ್ಯದರ್ಶಿ (ಆಡಳಿತ) ಡಿ.ಎನ್.ರವೀಂದ್ರ, ಸಹಾಯಕ ಕಾರ್ಯದರ್ಶಿ ಮೋಹನ್ ಕುಮಾರ್ (ಅಭಿವೃದ್ಧಿ) ಅಧ್ಯಕ್ಷತೆಯಲ್ಲಿ ಬೈಕ್ ಜಾಥಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಮದ್ದೂರು ಮತ್ತು ಕೊಳ್ಳೇಗಾಲ ಮಾರ್ಗದ ಸಿಗ್ನಲ್ ನಲ್ಲಿ ಮತದಾನ ಪ್ರತಿಜ್ಞೆ ವಿಧಿ ಬೋದಿಸಲಾಯಿತು. ನೆಲಮಾಕನಹಳ್ಳಿ, ಕಂದೇಗಾಲ, ಅಗಸನಪುರ, ಹುಸ್ಕೂರು, ಯತ್ತಂಬಾಡಿ ಮತ್ತು ಹಲಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಬೈಕ್ ರ್‍ಯಾಲಿ ಮೂಲಕ ಮತದಾನದ ಜಾಗೃತಿಯನ್ನು ಮೂಡಿಸಲಾಯಿತು.
ಇದೇ ಸಂದರ್ಭದಲ್ಲಿ ಸಹಾಯಕ ನಿರ್ದೇಶಕದೀಪು, ತಾ.ಪಂ. ವ್ಯವಸ್ಥಾಪಕ ಮುನೇಂದ್ರ ಕುಮಾರ್, ಸಹಾಯಕ ನಿರ್ದೇಶಕ (ಆಡಳಿತ) ಪಾರ್ಥಸಾರಥಿ ರವರು, ತಾಲ್ಲೂಕು ಪಿಡಿಒ ಸಂಘದ ಅಧ್ಯಕ್ಷ ಕೇಶವಮೂರ್ತಿ, ತಾಲ್ಲೂಕು ಐಇಸಿ ಸಂಯೋಜಕ ಸುನಿಲ್ ಕುಮಾರ್.ಹೆಚ್ ಮತ್ತಿತರರು ಉಪಸ್ಥಿತರಿದ್ದರು.




