Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| KRS ಅಚ್ಚುಕಟ್ಟಿಗೆ 18 ದಿನಗಳ ಕಾಲ ಕಟ್ಟುಪದ್ದತಿಯಲ್ಲಿ ನೀರು

ಕೆ.ಆರ್.ಎಸ್ ನಿಂದ ಬೆಳೆಗಳಿಗೆ ಜನವರಿ 10 ರಿಂದ 18 ದಿನಗಳು ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಮಾತನಾಡಿದರು. ಜನವರಿ 10 ರಿಂದ 18 ದಿನಗಳ ಕಾಲ ನೀರು ಹರಿಸಲಾಗುವುದು. 12 ದಿನಗಳ ಕಾಲ ನೀರು ನಿಲುಗಡೆ ಮಾಡಿ, ಇದೇ ರೀತಿ ನಾಲ್ಕು ಬಾರಿ ನೀರು ನೀಡಲಾಗುವುದು ಎಂದರು.

ಮಂಡ್ಯ ಜಿಲ್ಲೆಯ ಮಳವಳ್ಳಿ ಹಾಗೂ ಮದ್ದೂರು ತಾಲ್ಕೂಕಿನ ಕೊನೆಯ ಭಾಗಕ್ಕೂ ನೀರು ಹರಿಸಲಾಗುವುದು. ರೈತರು ಅಲ್ಪವಧಿ ಬೆಳೆಗಳ ನಾಟಿ ಕೆಲಸವನ್ನು ಪ್ರಾರಂಭಿಸಬೇಕು ಎಂದರು.

ಕೃಷಿ ಹಾಗೂ ನೀರಾವರಿ ಇಲಾಖೆ ಸಹಕಾರದೊಂದಿಗೆ ರೈತರು ಎರಡು ಬೆಳೆಗಳನ್ನು ಬೆಳೆಯಬೇಕು. ಇಲಾಖೆಗಳು ನೀಡುವ ಸಲಹೆ ಹಾಗೂ ಸೂಚನೆಗಳನ್ನು ಪಾಲಿಸಿ ಎಂದರು.

156 ದಿನಗಳ ಕಾಲ ಅಣೆಕಟ್ಟೆ ಪೂರ್ಣ ಭರ್ತಿ

ಇತಿಹಾಸದಲ್ಲಿ ಇದೇ ಮೊದಲು 92 ವರ್ಷಗಳ ನಂತರ 156 ದಿನಗಳ ಕಾಲ ಕೆ.ಆರ್.ಎಸ್. ಅಣೆಕಟ್ಟು 124.48 ಅಡಿ ತುಂಬಿದೆ. ಇದು ಟೀಕೆ ಟಿಪ್ಪಣಿ ಮಾಡುವವರಿಗೆ ಉತ್ತರ ನೀಡಿದೆ. ಜುಲೈ ಮಾಹೆಯಿಂದ ಡಿಸೆಂಬರ್ ಮಾಹೆಯವರೆಗೂ ಬೆಳೆಗಳಿಗೆ ನಿರಂತರವಾಗಿ ನೀರು ನೀಡಲಾಗಿದೆ ಎಂದರು. ಹೊಸ ವರ್ಷ ಹಾಗೂ ಮುಂಬರುವ ಸಂಕ್ರಾಂತಿ ನಾಡಿನ ಜನತೆಗೆ ಒಳಿತು ಮಾಡಲಿ ಎಂದು ಶುಭ ಹರೈಸಿಸರು.

ಸಭೆಯಲ್ಲಿ ವಿಧಾನಸಭಾ ಶಾಸಕರಾದ ಎ.ಬಿ ರಾಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣಯ್ಯ, ಪಿ.ರವಿಕುಮಾರ್, ಉದಯ್ , ವಿಧಾನ ಪರಿಷತ್ ಶಾಸಕ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ‌ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ