Thursday, May 16, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ನೀರಿನ ಸಮಸ್ಯೆ ಬಗ್ಗೆ ಎಚ್ಚರ ವಹಿಸಿ: ನರೇಂದ್ರಸ್ವಾಮಿ

ಬರಗಾಲ ಎದುರಾಗಿರುವುದರಿಂದ ನೀರಿನ ಸಮಸ್ಯೆ ಕಂಡುಬರದಂತೆ ಕಂದಾಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕೆಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಶಾಸಕ ಕಚೇರಿಯಲ್ಲಿ ಬರ ನಿರ್ವಹಣೆ ಸಂಬಂಧ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮಳೆ ಇಲ್ಲದೇ ಬರಗಾಲ ಬಂದಿರುವುದರಿಂದ ಹೆಚ್ಚಾಗಿ ನೀರಿನ ಸಮಸ್ಯೆ ಎಲ್ಲೆಲ್ಲಿಯೂ ಕಂಡು ಬರುವ ಮುನ್ಸೂ ಚನೆ ಇದ್ದು, ನೀರನ್ನು ಸಮಪರ್ಕವಾಗಿ ನೀಡಲು ಗ್ರಾ.ಪಂ ಪಿಡಿಓ ಅಧಿಕಾರಿಗಳು ಮೇಲ್ಟಟ್ಟದ ಅಧಿಕಾರಿಗಳೊಂದಿಗೆ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ರ‍್ಚೆ ನಡೆಸಿ ತಕ್ಷಣದಲ್ಲಿಯೇ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಗ್ರಾ.ಪಂ ಅಭಿವೃದ್ದಿ ಅಧಿಕಾರಿಗಳು ಬೆಳಿಗ್ಗೆ 8 ಗಂಟೆಗೆ ಪಂಚಾಯಿತಿಗೆ ಹೋಗಿ ವ್ಯಾಪ್ತಿಯ ಗ್ರಾಮಗಳಲ್ಲಿ ಯಾವುದಾದರೂ ಸಮಸ್ಯೆ ಇದಿಯೇ ಎನ್ನುವುದನ್ನು ಖಚಿತಪಡಿಸಿಕೊಂಡು ಸಮಸ್ಯೆ ಇದ್ದರೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಸಲಹೆ ನೀಡಿದರು.

ಮಳವಳ್ಳೀ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬಗ್ಗೆ ಸಾರ್ವ ಜನಿಕರು ದೂರವಾಣಿಯ ಮೂಲಕ ತಿಳಿಸಿರುತ್ತಾರೆ, ಅಧಿಕಾರಿಗಳು ನೀರು ನಿರ್ವಹಣೆ ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೋ ಕೈಗೊಳ್ಳಿ. ಆದರೇ ನೀರಿನ ಸಮಸ್ಯೆ ಬರದಂತೆ ನೋಡಿಕೊಳ್ಳಬೇಕೆಂದರು.

ಮಳವಳ್ಳಿ ತಾಲ್ಲೂಕು ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮಗಳಿಗೆ ಭೇಟಿಕೊಟ್ಟು, ಜನ ಜಾನುವಾರುಗಳಿಗೆ ಯಾವುದಾದರೂ ರೋಗಕ್ಕೆ ತುತ್ತಾಗುತ್ತಿರುವು ದರ ಬಗ್ಗೆ ಗಮನ ಹರಿಸಬೇಕು, ಸಮಸ್ಯೆ ಕಂಡು ಬಂದರೇ ಕೂಡಲೇ ಪರಿಹಾರ ಕಂಡುಕೊಳ್ಳಬೇಕೆಂದು ತಿಳಿಸಿದರು.

ನೀರನ್ನು ವ್ಯಯ ಮಾಡದಂತೆ ಸರ‍್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು, ಪೈಪ್‌ಗಳಲ್ಲಿನ ನೀರು ಸೋರಿಕೆಯನ್ನು ನಿಲ್ಲಿಸಬೇಕು, ಕೆಲವೊಂದು ಸಣ್ಣಪುಟ್ಟ ಸಮಸ್ಯೆಗಳಿದ್ದರೇ ತಕ್ಷಣದಲ್ಲಿಯೇ ಬಗೆಹರಿಸಿಕೊಂಡು ಸಮರ್ಪಕ ನೀರು ಕೊಡಲು ಮುಂದಾಗಬೇಕೆಂದು ಹೇಳಿದರು.

ಸಭೆಯಲ್ಲಿ ಬರ ನಿರ್ವಹಣೆ ತಾಲ್ಲೂಕು ನೋಡಲ್ ಅಧಿಕಾರಿ ಪುಟ್ಟಸ್ವಾಮಿಗೌಡ, ತಹಶೀಲ್ದಾರ್ ಲೊಕೇಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಮತ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!