Sunday, November 22, 2026

ಪ್ರಾಯೋಗಿಕ ಆವೃತ್ತಿ

ನೀರಿನ ಅಪವ್ಯಯ ತಡೆ ಎಲ್ಲರ ಆದ್ಯಕರ್ತವ್ಯ : ಅಮರಾವತಿ ಅಶ್ವಥ್

ನೀರಿನ ಮಿತ ಬಳಕೆ ಹಾಗೂ ಸದ್ಬಳಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ನೀರನ್ನು ಅಪವ್ಯಯ ಆಗದಂತೆ ಬಳಸುವುದು ನಮ್ಮೆಲ್ಲರ ಆದ್ಯಕರ್ತವ್ಯವಾಗಿದೆ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಅಮರಾವತಿ ಸಿ.ಅಶ್ವಥ್ ಹೇಳಿದರು.

ಮಂಡ್ಯ ತಾಲೂಕಿನ ಮಂಗಲ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಮಂಗಲ ನೀರು ಬಳಕೆದಾರರ ಸಹಕಾರ ಸಂಘದ ವತಿಯಿಂದ ಏರ್ಪಡಿಸಿದ್ದ 69ನೇ ರಾಷ್ಟ್ರೀಯ ಸಹಕಾರ ಸಪ್ತಾಹದ ಅಂಗವಾಗಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಆರ್ಥಿಕ ನೆರವಿನ ಸಂಚಾರಿ ಕುಡಿಯುವ ನೀರಿನ ಟ್ಯಾಂಕರ್‌ನ ಲೋಕಾರ್ಪಣೆ ನೆರವೇರಿಸಿ ಮಾತನಾಡಿದರು.

ಜಾನುವಾರುಗಳಿಗೆ ಹಾಗೂ ರೈತಾಪಿ ವರ್ಗಕ್ಕೆ ತುಂಬಾ ಅನುಕೂಲವಾಗುವ ನಿಟ್ಟಿನಲ್ಲಿ ನೀರು ಪೂರೈಸುವ ಸಂಚಾರಿ ವಾಹನವನ್ನು 1,75,೦೦೦ ರೂ ಗಳ ಅನುದಾನವನ್ನು ಈ ವಾಹನದ ಖರೀದಿಗೆ ನೀಡಲಾಗಿದೆ, ಸಂಚಾರಿ ವಾಹನದಿಂದ ಗ್ರಾಮ ಪಂಚಾಯಿತಿಯ ಜನ, ಜಾನುವಾರು, ಜೀವ ಸಂಕುಲಗಳಿಗೆ ಅನುಕೂಲವಾಗುತ್ತದೆ ಎಂದರು.

ಕಾವೇರಿ ನೀರಾವರಿ ನಿಗಮ ಅಧೀಕ್ಷಕ ಇಂಜಿನಿಯರ್ ಹೆಚ್.ಎಸ್.ಆನಂದ್ ಮಾತನಾಡಿ, ನೀರಿನ ಸದ್ಭಳಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು. ಜಾಗೃತಿಯಿಂದ ನೀರನ್ನು ಮಿತವಾಗಿ ಬಳಸುವ ಮೂಲಕ ಸದ್ಬಳಕೆ ಮಾಡಿಕೊಳ್ಳಿ ಎಂದು ರೈತರಿಗೆ ಸಲಹೆ ನೀಡಿದರು.

ಮಂಗಲ ನೀರು ಬಳಕೆದಾರರ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಮಂಗಲ ಎಂ.ಯೋಗೀಶ್ ಮಾತನಾಡಿ,  ನೀರು ಬಳಕೆದಾರರ ಸಂಘಗಳಿಗೆ ನೀರಾವರಿ ಕಾಯಿದೆ ತಿದ್ದುಪಡಿ ತಂದು ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.

ಮಂಗಲ ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷ ಎಂ.ಇ.ಮಹೇಶ್ಶ, ಉಪಾಧ್ಯಕ್ಷ ನಾಗರಾಜು, ಕಾರ್ಯದರ್ಶಿ ಎಂ.ಬಿ.ಸುರೇಶ್, ಮಾಜಿ ಪ್ರಧಾನರಾದ ಕೆ.ಶಂಕರೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಎಂ.ಜೆ.ಗಿರೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಸಿ. ರವಿಕುಮಾರ್, ಪಿಎಸಿಎಸ್ ಅಧ್ಯಕ್ಷ ಎಂ.ಇ.ಶಂಕರ, ಎಂಪಿಸಿಎಸ್ ಅಧ್ಯಕ್ಷ ವರದರಾಜು, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ನಾಗೇಂದ್ರ, ದಿವಾಕರ್, ರೇಖಾ ಇತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ