Friday, November 20, 2026

ಪ್ರಾಯೋಗಿಕ ಆವೃತ್ತಿ

ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ; ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮಳೆ ಮುಂದುವರೆದಿದ್ದು ಏಪ್ರಿಲ್ 2ರಿಂದ ಮಳೆ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಈ 10 ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇನ್ನು ವಿಜಯನಗರ, ಶಿವಮೊಗ್ಗ ತುಮಕೂರು, ಮಂಡ್ಯ ಕೋಲಾರ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್‌ನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ