Wednesday, November 18, 2026

ಪ್ರಾಯೋಗಿಕ ಆವೃತ್ತಿ

ದಕ್ಷಿಣ ಶಿಕ್ಷಕರ ಕ್ಷೇತ್ರ| ಮತ ಚಲಾಯಿಸಲು ಯಾವ ದಾಖಲೆಗಳು ಅಗತ್ಯ….ಇಲ್ಲಿದೆ ಮಾಹಿತಿ….

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾನವು ಜೂನ್ 03 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವ ಮತದಾರರು ಕಡ್ಡಾಯವಾಗಿ ಮತದಾನ ಮಾಡಬಹುದು.

ಭಾರತ ಚುನಾವಣಾ ಆಯೋಗದ ಆದೇಶದಂತೆ ಜೂನ್ 03 ರಂದು ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ(ಎಪಿಕ್) ಯನ್ನು ಮುಖ್ಯ ದಾಖಲಾತಿಯಾಗಿ ಹಾಜರುಪಡಿಸಬೇಕು.

ಮತದಾರರ ಪಟ್ಟಿಯಲ್ಲಿ ಹೆಸರಿದ್ದವರು ಎಪಿಕ್ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳಾದ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಇಂಡಿಯನ್ ಪಾಸ್‍ಪೋರ್ಟ್, ಸರ್ವೀಸ್ ಗುರುತಿನ ಚೀಟಿ(ನೌಕರರು ಕೇಂದ್ರ/ ರಾಜ್ಯ ಸರ್ಕಾರ ಪಬ್ಲಿಕ್ ಸೆಕ್ಟರ್, ಲೋಕಲ್ ಬಾಡಿಸ್ ಇತರ ಪ್ರೈವೆಟ್ ಇಂಡಸ್ಟ್ರೀಯಲ್ ಹೌಸಸ್). ಅಪಿಷಿಯಲ್ ಗುರುತಿನ ಚೀಟಿ (ಎಂ.ಪಿ, ಎಂ.ಎಲ್‍ಎ, ಎಂಎಲ್‍ಸಿ), ಶಿಕ್ಷಣ ಸಂಸ್ಥೆಯಿಂದ ನೀಡಿರುವ ಸರ್ವಿಸ್ ಗುರುತಿನ ಚೀಟಿ, ವಿಶ್ವವಿದ್ಯಾನಿಲಯದಿಂದ ನೀಡಿರುವ ಪ್ರಮಾಣ ಪತ್ರ, ವಿಶೇಷಚೇತನ ಗುರುತಿನ ಚೀಟಿ, ಯುನಿಕ್ ಡಿಸಾಬಿಲಿಟಿ ಗುರುತಿನ ಚೀಟಿ(ಯುಡಿಐಡಿ) ಈ ಪೈಕಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ