Thursday, September 19, 2024

ಪ್ರಾಯೋಗಿಕ ಆವೃತ್ತಿ

ಶ್ವೇತ ಕ್ರಾಂತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ : ಬಸವರಾಜ ಬೊಮ್ಮಾಯಿ

ಈ ಹಿಂದೆ ನಾವು ಹಸಿರು ಕ್ರಾಂತಿಯನ್ನು ನೋಡಿದ್ದೇವೆ, ಆದರೆ ಈಗ ದೇಶದಲ್ಲಿ ಹಾಲಿನ ಉತ್ಪಾದನೆಯಲ್ಲಿ ಭಾರತ ಮುನ್ನಡೆ ಸಾಧಿಸಿದ್ದು, ಕರ್ನಾಟಕವು ದೇಶದ ಶ್ವೇತ ಕ್ರಾಂತಿಗೆ ಅದರದೇ ಆದ ಗಮನಾರ್ಹ ಕೊಡುಗೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಆವರಣದಲ್ಲಿ ಶುಕ್ರವಾರ ನಡೆದ ಮೆಗಾ ಡೈರಿ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯವು ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ, ಇದಕ್ಕೆ ಕಾರಣರಾದ ಎಲ್ಲಾ ಹಾಲು ಉತ್ಪಾದಕರು ಹಾಗೂ ರೈತ ಮಹಿಳೆರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಸಮಗ್ರ ಕೃಷಿಯಲ್ಲಿ ಹೈನುಗಾರಿಕೆಯ ಪಾತ್ರ ಅಪಾರವಾಗಿದೆ. ಈ ಹಿಂದೆ ಯಡಿಯೂರಪ್ಪ ಅವರ ಅಧಿಕಾರಾವದಿಯಲ್ಲಿ ಹಾಲಿಗೆ ಪ್ರೋತ್ಸಾಹ ಧನ ನೀಡಲು ಪ್ರಾರಂಭಿಸಲಾಯಿತು. ಪ್ರಸ್ತುತ ಲೀಟರ್ ಹಾಲಿಗೆ ಪ್ರೋತ್ಸಾಹ ಧನ ರೂ.5 ರೂ.ನೀಡಲಾಗುತ್ತಿದೆ ಎಂದರು.

ಕೃಷಿ ಹಾಗೂ ಹೈನುಗಾರಿಕೆ ಕ್ಷೇತ್ರದಲ್ಲಿ ಸಾಕಷ್ಟು ಸವಾಲುಗಳಿವೆ, ಸಹಕಾರ ಕ್ಷೇತ್ರದಲ್ಲೂ ಸಾಕಷ್ಟು ಬದಲಾವಣೆಗಳನ್ನು ತರಬೇಕಾಗಿದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರು, ಅಮಿತ್ ಶಾ ಅವರಿಗೆ ಸಹಕಾರ ಖಾತೆಯ ಜವಾಬ್ದಾರಿ ನೀಡಿದ್ದಾರೆ ಎಂದರು.

ಇಲ್ಲಿ ಪ್ರಾರಂಭವಾಗಿರುವ ಮೆಗಾ ಡೈರಿಯೂ ದಿನಕ್ಕೆ 10 ಲಕ್ಷ ಲೀಟರ್ ಹಾಲನ್ನು ಪ್ಯಾಕಿಂಗ್ ಮಾಡಿ ವಿತರಣೆ ಮಾಡುವ ಕೆಲಸವನ್ನು ಸ್ವತಂತ್ರವಾಗಿ ನಿರ್ವಹಿಸಲಿದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅಮಿತ್ ಶಾ ಅವರು ಇಲಾಖೆಯಲ್ಲಿ ಹಲವು ಸುಧಾರಣೆಗಳನ್ನು ಕೈಗೊಂಡಿದ್ದಾರೆ ಎಂದರು.

ಈ ಹಿಂದೆ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ಮೆಗಾ ಡೈರಿಯನ್ನು ಸ್ಥಾಪಿಸಿ ಅನುಕೂಲ ಮಾಡಿಕೊಟ್ಟಿದ್ದರು. ಇದರಿಂದಾಗಿ ರಾಜ್ಯ ಎಲ್ಲಾ ಹಾಲು ಒಕ್ಕೂಟಗಳು ಲಾಭದಾಯಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಮೈಷುಗರ್ ಕಾರ್ಖಾನೆ ಇನ್ನಷ್ಟು ಕಾಯಕಲ್ಪ ನೀಡಲಾಗುವುದು ಎಂದು ಭರವಸೆ ನೀಡಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಸಚಿವರಾದ ಎಸ್ ಟಿ ಸೋಮಶೇಖರ್, ಕೆ ಗೋಪಾಲಯ್ಯ, ನಾರಾಯಣ ಗೌಡ, ಶಾಸಕರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸುರೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಮಧು ಮಾದೇಗೌಡ, ಮನ್ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಉಪಾಧ್ಯಕ್ಷ ರಘುನಂದನ್, ವ್ಯವಸ್ಥಾಪಕ ನಿರ್ದೇಶಕ ಡಾ.ಮಂಜೇಶ್, ನಿರ್ದೇಶಕರಾದ ಎಚ್.ಟಿ.ಮಂಜು, ಡಾಲು ರವಿ, ಶಿವಕುಮಾರ್, ನೆಲ್ಲಿಗೆರೆ ಬಾಲು,ಎಸ್.ಪಿ.ಸ್ವಾಮಿ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!