Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ₹ 54.65 ಕೋಟಿ ಆಸ್ತಿ ಹೊಂದಿರುವ HDKಗಿಂತ ಪತ್ನಿಯೇ ಶ್ರೀಮಂತೆ

ಮಂಡ್ಯ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಹೆಚ್.ಡಿ.ಕುಮಾರ ಸ್ವಾಮಿ ಅವರು, ₹10.71 ಕೋಟಿ ರೂ. ಮೌಲ್ಯದ ಚರಾಸ್ತಿ, 43.94 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಸೇರಿದಂತೆ 54.65 ಕೋಟಿ. ಮೌಲ್ಯದ ಆಸ್ತಿ ಹೊಂದಿದ್ದಾರೆ.

ಇವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು 90.32 ಕೋಟಿ ಮೌಲ್ಯದ ಚರಾಸ್ತಿ, 64.07 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಸೇರಿದಂತೆ 154.39 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಕುಮಾರಸ್ವಾಮಿ ಅವರಿಂತ ಪತ್ನಿಯೇ ಶ್ರೀಮಂತೆಯಾಗಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಎರಡು ಕ್ರಿಮಿನಲ್, ಒಂದು ಎನ್.ಸಿ.ಆರ್. ಸೇರಿದಂತೆ ಮೂರು ಪ್ರಕರಣಗಳಿವೆ, 65ರ ವಯಸ್ಸಿನ ಕುಮಾರಸ್ವಾಮಿ ಬಿ.ಎಸ್ಸಿ ಮುಗಿಸಿದ್ದು, ತಮ್ಮ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಈ ಎಲ್ಲ ವಿವರಗಳನ್ನು ನೀಡಿದ್ದಾರೆ.

ಕುಮಾರಸ್ವಾಮಿ ಅವರು ಸಂಪೂರ್ಣ ರಾಜಕೀಯ ಹಿನ್ನಲೆಯುಳ್ಳ ಕುಟುಂಬದಿಂದ ಬಂದವರಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪುತ್ರರಾಗಿದ್ದು, ಇವರೂ ಕೂಡ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಅತಿ ಚಿಕ್ಕ ವಯಸ್ಸಿನಲ್ಲೇ ಕರ್ನಾಟಕದ ಮುಖ್ಯಮಂತ್ರಿ ಆಗಿದ್ದ ಹೆಗ್ಗಳಿಕೆ ಹೊಂದಿದ್ದಾರೆ. ಇವರ ಪತ್ನಿ ಅನಿತಾ ಕುಮಾರಸ್ವಾಮಿ ಅವರೂ ಶಾಸಕಿಯಾಗಿದ್ದಾರೆ. ಇವರ ಸಹೋದರ ಎಚ್.ಡಿ.ರೇವಣ್ಣ ಅವರೂ ಕೂಡ ಮಾಜಿ ಸಚಿವರಾಗಿದ್ದು, ಪ್ರಸ್ತುತ ಶಾಸಕರಾಗಿದ್ದಾರೆ. ಪುತ್ರ ನಿಖಿಲ್ ಕುಮಾರಸ್ವಾಮಿ ಅವರೂ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷರಾಗಿದ್ದಾರೆ. ಕುಮಾರಸ್ವಾಮಿ ಅವರು ಮೂಲತಃ ಹಾಸನ ಜಿಲ್ಲೆಯವರಾಗಿದ್ದರೂ ಇದೇ ಮೊದಲ ಬಾರಿಗೆ ಮಂಡ್ಯ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ