ಭಾರತೀಯ ವಿದ್ಯಾರ್ಥಿಗಳು ಬೇರೆ ದೇಶದವರೊಂದಿಗೆ ಸ್ಪರ್ಧೆ ಮಾಡುವ ರೀತಿಯಲ್ಲಿ ಶಿಕ್ಷಣ ನೀಡಬೇಕು.ವಿದ್ಯಾರ್ಥಿಗಳಿಂದೇ ಈ ದೇಶವನ್ನು ಕಟ್ಟಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಸದಸ್ಯರು, ಭಾರತೀಯ ವಿಜ್ಞಾನ ಕಾಂಗ್ರೆಸ್ ಅಸೋಸಿಯೇಷನ್ ಅಧ್ಯಕ್ಷ, ಮಾಜಿ ಕುಲಪತಿ ಡಾ.ಕೆ.ಎಸ್. ರಂಗಪ್ಪ ರವರು ತಿಳಿಸಿದರು.
ಮಂಡ್ಯ ತಾಲ್ಲೂಕಿನ ಯಲಿಯೂರು ಬಳಿ ಇರುವ ಕಾವೇರಿ ಎಜುಕೇಷನ್ ಅಂಡ್ ರಿಸರ್ಚ್ ಟ್ರಸ್ಟ್,ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಇಂಜಿಯರಿಂಗ್ ಕಾಲೇಜಿನಲ್ಲಿ ನಡೆದ ಪದವಿ ಪ್ರಧಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಜ್ಞಾನ ಕೌಶಲ್ಯ ನೀಡುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾದುದ್ದು, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ದೇಶದ ಅಭಿವೃದ್ಧಿಗೆ ಮುಂದಾದರೆ ನಮ್ಮ ದೇಶವೂ ಪ್ರಗತಿ ಹೊಂದುತ್ತದೆ ಎಂದರು.
ವಿದ್ಯಾರ್ಥಿಗಳು ಯಾವಾಗಲೂ ಸಕಾರಾತ್ಮಕ ವಾಗಿ ಚಿಂತನೆ ಮಾಡಬೇಕು ಹಾಗೂ ಸಕರಾತ್ಮಕವಾಗಿ ಇರಬೇಕು. ವಿದ್ಯಾರ್ಥಿಗಳು ಪ್ರತಿದಿನ ತಮ್ಮನ್ನು ತಾವು ಹೊಸ ಹೊಸ ವಿಷಯಗಳಲ್ಲಿ ತೊಡಗಿಸಿಕೊಳ್ಳಬೇಕು.ಹೊಸ ಹೊಸ ವಿಷಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಸಿ.ಇ.ಆರ್.ಟಿ. ಪ್ರೊ. ಟಿ. ನಾಗೇಂದ್ರ ಮಾತನಾಡಿ,ವಿದ್ಯಾರ್ಥಿಗಳು ರಂಗಪ್ಪ ಅವರನ್ನು ಮಾದರಿಯಾಗಿ ಇಟ್ಟುಕೊಂಡು ಸಾಧನೆಯನ್ನು ಮಾಡಬೇಕು. ಉತ್ತಮ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರು ತಮ್ಮ ಕಿರಿಯ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸಹಕಾರ ಮಾಡಿಕೊಡಬೇಕು ಎಂದರು .
ಹಿರಿಯ ವಿದ್ಯಾರ್ಥಿಗಳನ್ನು ಕಿರಿಯ ವಿದ್ಯಾರ್ಥಿಗಳು ಪರಿಚಯ ಮಾಡಿಕೊಂಡು ಅವರಿಂದ ಕಂಪನಿಗಳಲ್ಲಿ ಕೆಲಸವನ್ನು ತೆಗೆದುಕೊಳ್ಳುವುದಕ್ಕೆ ಪ್ರಯತ್ನ ಪಡಬೇಕು.ಇದರಿಂದ ಹಿರಿಯ ವಿದ್ಯಾರ್ಥಿಗಳು ಹಾಗೂ ಕಿರಿಯ ವಿದ್ಯಾರ್ಥಿಗಳು ನಡುವೆ ಸಂಬಂಧ ಗಟ್ಟಿಯಾಗುತ್ತದೆ ಎಂದರು.
ಉಪಾಧ್ಯಾಯರ ಮಾರ್ಗದರ್ಶನವನ್ನು ಪಡೆದುಕೊಂಡು ವಿದ್ಯಾರ್ಥಿಗಳು ಉತ್ತಮವಾದ ಕೆಲಸವನ್ನು ತೆಗೆದುಕೊಳ್ಳಲು ಮುಂದಾಗಬೇಕು ಎಂದರು.
ಕೋವಿಡ್ ಕಾರಣದಿಂದ ಕಳೆದ ಮೂರು ವರ್ಷಗಳಿಂದ ಪದವಿ ಪ್ರದಾನ ಮಾಡಿರಲಿಲ್ಲ.ಹಾಗಾಗಿ ಮೂರು ವರ್ಷಗಳ ವಿದ್ಯಾರ್ಥಿಗಳಿಗೆ ಇಂದು ಪದವಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಿ ಇ ಆರ್ ಟಿ ಅಧ್ಯಕ್ಷ ಡಾ. ಎಚ್ ರಾಜು, ಪ್ರಾಂಶುಪಾಲರಾದ ಕಟ್ಟಪ್ಪ, ಉಪ ಪ್ರಾಂಶುಪಾಲರಾದ ಮಂಜುನಾಥ್ ಸೇರಿದಂತೆ ಇನ್ನಿತರರಿದ್ದರು.




