ರಾಜ್ಯ ಮಟ್ಟದ ಮಹಿಳೆಯರ ಹಾಗೂ ಪುರುಷರ ರಾಗಿಮುದ್ದೆ ಉಣ್ಣುವ ಸ್ಪರ್ಧೆ ಮೇ 15 ಪಾಂಡವಪುರ ತಾಲ್ಲೂಕಿನ ಪಿಎಸ್ಎಸ್ ಕೆ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಎಣ್ಣೆಹೊಳೆಕೊಪ್ಪಲು ವೈ.ಸಿ.ನಿರಂಜನ್ ತಿಳಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ, ಪಿಎಸ್ಎಸ್ ಕೆ ಶಿಕ್ಷಣ ಸಂಸ್ಥೆ ಪಾಂಡವಪುರ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಪರಿಸರ ಜಾಗೃತಿ ಅಭಿಯಾನ ಪ್ರಯುಕ್ತ ರಾಗಿ ಮುದ್ದೆ ಉಣ್ಣುವ ಸ್ಪರ್ಧೆ ನಡೆಯುತ್ತಿದ್ದು, ಒಂದು ಟಗರು (ಪ್ರಥಮ ಬಹುಮಾನ), ಒಂದು ವಾತ (ದ್ವಿತೀಯ), 5 ನಾಟಿ ಕೋಳಿ (ತೃತೀಯ) ಹಾಗೂ ಸಮಾಧಾನಕರ ಬಹುಮಾನವಾಗಿ ಒಬ್ಬರಿಗೆ ಎರಡು ನಾಟಿ ಕೋಳಿಯನ್ನು ಬಹುಮಾನವಾಗಿ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹೆಚ್.ಕೆ.ಸೋಮಶೇಖರ್, ಮಂಡ್ಯ ಜಿಲ್ಲಾಧ್ಯಕ್ಷ ಕಡತನಾಳು ಕೆ.ಪಿ.ಇಂದ್ರಕುಮಾರ್ ಇದ್ದರು. ಹೆಚ್ಚಿನ ಮಾಹಿತಿಗಾಗಿ, 9606367936, 8105635759 ಸಂಪರ್ಕಿಸಬಹುದು.