Thursday, September 19, 2024

ಪ್ರಾಯೋಗಿಕ ಆವೃತ್ತಿ

ಲೋಕ ಅದಾಲತ್ ಮೂಲಕ ಕಾನೂನು ವ್ಯಾಜ್ಯ ಬಗೆಹರಿಸಿಕೊಳ್ಳಿ

ಪರಸ್ಪರ ರಾಜಿ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕಾದ ಕಾನೂನು ಸಮಸ್ಯೆಗಳನ್ನು ಲೋಕ್ ಅದಾಲತ್ ನಲ್ಲಿ ಸರಳವಾಗಿ ಬಗೆಹರಿಸಿಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಎ.ಎಂ.ನಳಿನಿಕುಮಾರಿ ಹೇಳಿದರು.

ಮಂಡ್ಯ ನಗರದ ಬಾಲಭವನದಲ್ಲಿ ಅಖಿಲ ಕರ್ನಾಟಕ ಸಿರಿಗನ್ನಡ ವೇದಿಕೆ, ಅಮೃತ ಲಯನ್ಸ್ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಎಇಟಿ ನರ್ಸಿಂಗ್ ಕಾಲೇಜು ಆಯೋಜಿಸಿದ್ದ ವಿಶ್ವ ತಾಯಂದಿರ ಹಾಗೂ ದಾದಿಯರ ದಿನಾಚರಣೆಯ ಅಂಗವಾಗಿ ಎಇಟಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿನ ಪ್ರತಿಯೊಬ್ಬ ನಾಗರಿಕರಿಗೆ ಕಾನೂನಿನ ಅರಿವು ಅತ್ಯವಶ್ಯಕವಾಗಿ ಬೇಕಾಗಿದೆ.

ಸಂವಿಧಾನದ ಕಾನೂನುಗಳು ಎಲ್ಲರಿಗೂ ಅನ್ವಯ ಪಾಲನೆಯಾಗದಿದ್ದರೆ ದಂಡ ಅಥವಾ ಶಿಕ್ಷೆ ಇದ್ದೇ ಇದೆ.ತಪ್ಪುಗಳಾಗದಂತೆ ಎಚ್ಚರಿಕೆಯಿಂದ ಬಾಳಬೇಕು. ತೊಂದರೆಯಾಗದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು ಅಗತ್ಯವಿದೆ ಎಂದು ನುಡಿದರು.

ಯಾವುದೇ ಶಾಲಾ-ಕಾಲೇಜು, ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಕಾನೂನುಗಳಿವೆ. ಅವುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ಪಾಲನೆ ಮಾಡಬೇಕು.ಜೀವನ ಕಾನೂನಿನ ಚೌಕಟ್ಟಿನಲ್ಲಿ ಸಾಗಬೇಕಿದೆ ಎಂದು ಸಲಹೆ ನೀಡಿದರು.

ಶ್ರೀಸಾಮಾನ್ಯರ ರಕ್ಷಣೆಗಾಗಿ ಕಾನೂನು ಸೇವೆಗಳ ಪ್ರಾಧಿಕಾರವಿದೆ.ಆರ್ಥಿಕವಾಗಿ ದುರ್ಬಲರು ನೆರವು ಪಡೆಯಬಹುದು. ಆಸ್ತಿ ವಿಭಾಗ, ಹಣಕಾನಿನ ಸಮಸ್ಯೆ, ಚೆಕ್‌ ಬೌನ್ಸ್, ಸಣ್ಣ ಸಣ್ಣ ಕ್ರಿಮಿನಲ್ ಪ್ರಕರಣಗಳನ್ನು ಸರಳವಾಗಿ ಬಗೆಹರಿಸಿಕೊಳ್ಳಿ ಎಂದು ಕಾನೂನು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಅಮೃತಾ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎಂ.ಲೋಕೇಶ್, ಕೃಷಿಕ ಲಯನ್ಸ್ ಸಂಸ್ಥೆಯ ಆಡಳಿತಾಧಿಕಾರಿ ಕೆ‌.ಟಿ. ಹನುಮಂತು, ಹಿರಿಯ ಪತ್ರಕರ್ತ ಕೊಳಲು ಶ್ರೀಪಾದು, ವಕೀಲೆ ರಶ್ಮಿ ಹಾಗೂ ಎಇಟಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಎಸ್.ಎಂ ನಂದಿನಿ, ಅಂಗನವಾಡಿ ಕಾರ್ಯಕರ್ತೆ ಪ್ರಮೀಳಾ ಸೇರಿದಂತೆ ಹಲವರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!