ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಂಡ್ಯ, ನೆಹರು ಯುವ ಕೇಂದ್ರ, ಮಂಡ್ಯ ಭಾರತ ಸೇವಾದಳ ಮಂಡ್ಯ ಘಟಕ, ಸರ್ಕಾರಿ ಪ್ರೌಢಶಾಲೆ ಬೇಲೂರು ಇವರ ಸಹಯೋಗದಲ್ಲಿ ವಿಶ್ವ ಬೈಸಿಕಲ್ ದಿನಾಚರಣೆ ಕಾರ್ಯಕ್ರಮ ಮಂಡ್ಯ ತಾಲ್ಲೂಕಿನ ಬೇಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಜರುಗಿತು.
ರಾಜ್ಯ ಪ್ರಶಸ್ತಿ ಪುರಸ್ಕೃತ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬೇಲೂರು ಸೋಮಶೇಖರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಸೈಕಲ್ಲನ್ನು ತುಳಿಯುವುದರಿಂದ ಇಂಧನ ಉಳಿತಾಯವಾಗುತ್ತದೆ. ಪರಿಸರ ಮಾಲಿನ್ಯ ತಡೆಗಟ್ಟುವುದು ಹಾಗೂ ಸದೃಢ ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳುವುದು ಸೇರಿದಂತೆ ಇನ್ನೂ ಹಲವಾರು ಉಪಯೋಗಗಳು ಸೈಕಲ್ ಬಳಸುವುದರಿಂದ ಸಿಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಉಮೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ. ಸಿB ಬೊಮ್ಮಯ್ಯ, ಗ್ರಾಮ ಪಂಚಾಯತ್ ಸದಸ್ಯ ಸತೀಶ್ಚಂದ್ರ, ಕೆ.ಆರ್. ದಿವ್ಯಶ್ರೀ, ಬಿ.ಸಿ. ಚನ್ನೆಗೌಡ, ಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಪವಿತ್, ದೈಹಿಕ ಶಿಕ್ಷಕಿ ಉಷಾರಾಣಿ ಹಾಗೂ ನೆಹರು ಯುವ ಕೇಂದ್ರದ ಹರ್ಷ, ಅಭಿಷೇಕ್, ಪ್ರಶಾಂತ್ ಹಾಜರಿದ್ದರು.