Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ | ವಿಶ್ವ ರಕ್ತದಾನಿಗಳ ದಿನಾಚರಣೆ – ಪುರಸ್ಕಾರ

ಮಂಡ್ಯ ನಗರದ ಹೊರವಲಯದಲ್ಲಿರುವ ಮಾಂಡವ್ಯ ಎಕ್ಸಲೆನ್ಸ್ ಪದವಿಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ನಿಯಂತ್ರಣ ಘಟಕ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ವಿವಿಧ ಇಲಾಖೆಗಳು ಮತ್ತು ವಿವಿಧ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಹಾಗೂ ಪುರಸ್ಕಾರ ಸಮಾರಂಭ ಯಶಸ್ವಿಯಾಗಿ ಜರುಗಿತು.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಎಚ್ ಎನ್. ಗೋಪಾಲಕೃಷ್ಣ ಉದ್ಘಾಟಿಸಿದರು, ಅಧ್ಯಕ್ಷತೆಯನ್ನು ಜಿ.ಪಂ ಸಿಇಓ ಶೇಖ್ ತನ್ವೀರ್ ಆಸೀಫ್ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಡಾ.ಎಚ್ ಎಲ್ ನಾಗರಾಜ್, ಭಾರತೀಯರ  ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಧನಂಜಯ್, ಡಾ. ಆಶಾಲತಾ, ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಮುರಳಿಧರ್ ಭಟ್, ಡಾ. ಅರುಣಾನಂದ ಭಾಗವಹಿಸಿದ್ದರು.

ಜಾಹೀರಾತು

ಇದೇ ಸಂದರ್ಭದಲ್ಲಿ ಅತಿ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸಿದ್ದ ಭಾರತೀಯರ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಜೀವಧಾರೆ ಟ್ರಸ್ಟ್ ಅಧ್ಯಕ್ಷ ನಟರಾಜ್ ಮತ್ತು ಪಿಇಎಸ್ ಇಂಜಿನಿಯರಿಂಗ್ ಕಾಲೇಜ್ ಸಂಸ್ಥೆ ಡಾ.ರಾಮಲಿಂಗಯ್ಯ ಇವರನ್ನು ಪುರಸ್ಕಾರ ನೀಡಿ ಗೌರವಿಸಲಾಯಿತು. ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಗೌರವಿಸಲಾಯಿತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!