Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ವಿಶ್ವ ಸುಲಭ ಲಭ್ಯತೆಯ ಜಾಗೃತಿ ದಿನಾಚರಣೆ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಂಡ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಡ್ಯ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಂಡ್ಯದ ಭಾರತೀಯ ರೆಡ್ ಕ್ರಾಸ್ ಭಾವನದಲ್ಲಿ ವಿಶ್ವ ಸುಲಭ ಲಭ್ಯತೆಯ ಜಾಗೃತಿ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್ ನಾಗರಾಜು ಕಾರ್ಯಕ್ರಮ ಉದ್ಘಾಟಿಸಿದರು, ನಂತರ ಮಾತನಾಡಿದ ಅವರು, ಕಲಚೇತನರು, ವಿಶೇಷ ಚೇತನರಿಗೆ 2016ರ ಕಾಯ್ದೆ ಅಡಿ ಸೌಲಭ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗಿದೆ, ವಿಶೇಷ ಚೇತನರಲ್ಲಿ ವಿಶ್ವಾಸ, ಭರವಸೆ ಮೂಡಿಸಲು ಬದುಕಲು ಬೇಕಾದ ಸೌಲಭ್ಯವನ್ನು ಈ ಕಾಯ್ದೆ ಅಡಿ ನೀಡಲಾಗುತ್ತಿದೆ. ಯಾವುದೇ ಅಪೇಕ್ಷೆ ಇಲ್ಲದೆ ಸಮಾಜದ ಕೆಳಮಟ್ಟದಲ್ಲಿರುವ ವ್ಯಕ್ತಿಗಳಿಗೆ ಸರ್ಕಾರ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೇ ಮೀರ ಶಿವಲಿಂಗಯ್ಯ ಮಾತನಾಡಿ, ಸಂಕಲ್ಪ ಎನ್ನುವುದು ಮುಖ್ಯವಾಗಿದೆ .ಒಳ್ಳೆ ಸಂಕಲ್ಪ ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರಿನ ಎಪಿಡಿ ಸಂಸ್ಥೆಯ ಯೋಜನಾ ಮುಖ್ಯಸ್ಥರಾದ ವಿಜಯಲಕ್ಷ್ಮಿ, ಫೇವರ್ಡ್ ರಾಜ್ಯಾಧ್ಯಕ್ಷ ಮಹೇಶ್, ಚಂದ್ರಗುರು ಫೇವರ್ಡ್ ಜಿಲ್ಲಾಧ್ಯಕ್ಷ ಡಾ.ನಾಗಪ್ಪ ,ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಅಧಿಕಾರಿ ರೋಹಿತ್, ಫೇವರ್ಡ್ ಕಾರ್ಯದರ್ಶಿ ಕಾರಸವಾಡಿ ಮಹದೇವು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ