Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸಾತನೂರಿನಲ್ಲಿ ವಿಶ್ವ ಪಲ್ಸ್ ಪೋಲಿಯೋ ದಿನ ಆಚರಣೆ

ವಿಶ್ವ ಪಲ್ಸ್ ಪೋಲಿಯೋ ದಿನದ ಅಂಗವಾಗಿ ರೋಟರಿ ಮಂಡ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಡ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಾತನೂರು ಹಾಗೂ ಅಚೀವರ್ಸ್ ಇಂಟರ್ನ್ಯಾಷನಲ್ ಶಾಲೆ, ಸಾತನೂರು ಇವರುಗಳ ಸಹಭಾಗಿತ್ವದಲ್ಲಿ ವಿಶ್ವ ಪಲ್ಸ್ ಪೋಲಿಯೋ ದಿನಾಚರಣೆಯನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಂದ ಜನಜಾಗೃತಿ ಜಾಥಾವನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ಪಲ್ಸ್ ಪೋಲಿಯೋ ಬಗ್ಗೆ ಅರಿವು ಮೂಡಿಸಲಾಯಿತು.

ಈ ಕಾರ್ಯಕ್ರಮವನ್ನು ಮಂಡ್ಯ ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ.ಅನಿಲ್ ಕುಮಾರ್  ಉದ್ಘಾಟಿಸಿ ಮಾತನಾಡಿ, ಕಳೆದ 11 ವರ್ಷಗಳ ಹಿಂದೆಯೇ ಭಾರತ ದೇಶವನ್ನು ಸಂಪೂರ್ಣವಾಗಿ ಪಲ್ಸ್ ಪೋಲಿಯ ಮುಕ್ತ ಭಾರತವನ್ನಾಗಿ ಘೋಷಿಸಲಾಗಿದ್ದು ಇನ್ನು ಮುಂದೆಯೂ ಈ ಸಮಸ್ಯೆ ಪುನರಾವರ್ತಿಸದಂತೆ ಗಮನಹರಿಸಲು ಪ್ರತಿ ವರ್ಷ ಪಲ್ಸ್ ಪೋಲಿಯೋ ಡ್ರಾಪ್ಸ್ ಅನ್ನು ನೀಡುತ್ತಿದ್ದು ಈ ಬಗ್ಗೆ ನಿರಂತರವಾಗಿ ಜನಜಾಗೃತಿ ಮೂಡಿಸಲು ಮಕ್ಕಳಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ತಿಮ್ಮರಾಜು ಎಸ್ ಎನ್ ಆರೋಗ್ಯ ಇಲಾಖೆಯು ರೋಟರಿ ಸಂಸ್ಥೆಯೊಂದಿಗೆ ಪಲ್ಸ್ ಪೋಲಿಯೋ ನಿಯಂತ್ರಣದಲ್ಲಿ ಇಡೀ ಪ್ರಪಂಚದಾದ್ಯಂತ ಉತ್ತಮ ಸೇವೆ ಸಲ್ಲಿಸುತ್ತಿದ್ದು ಈ ನಿಟ್ಟಿನಲ್ಲಿ ಎಲ್ಲ ಮಕ್ಕಳು ಈ ಬಗ್ಗೆ ಹೆಚ್ಚು ಜಾಗರೂಕತೆಯಿಂದ ಜೀವನ ನಡೆಸಲು ಹಾಗೂ ಇತ್ತೀಚಿಗೆ ಯುವಜನಾಂಗ ಹೆಚ್ಚಾಗಿ ತಂಬಾಕು ಹಾಗೂ ಇತರ ಮಾದಕ ವಸ್ತುಗಳ ಬಳಕೆಯಿಂದ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು ಉತ್ತಮ ಆರೋಗ್ಯಕ್ಕಾಗಿ ದುಶ್ಚಟಗಳಿಂದ ದೂರ ಇದ್ದು ಉತ್ತಮ ಆಹಾರ ಸೇವನೆ ಹವ್ಯಾಸವನ್ನು ರೂಡಿಸಿಕೊಂಡು ಅಗತ್ಯವಿದ್ದ ಸಂದರ್ಭದಲ್ಲಿ ತಕ್ಷಣ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆಯಲು ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಅಧ್ಯಕ್ಷರಾದ ಅನುಪಮಾ ರೋಟರಿ ಸಂಸ್ಥೆಯು ಆರೋಗ್ಯ ಇಲಾಖೆಯ ಜೊತೆಗೂಡಿ ನಿರಂತರವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಆಂದೋಲನವನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದ್ದು ಇಂತಹ ಆಂದೋಲನಗಳು ಯಶಸ್ವಿಯಾಗಲು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವ ಅತ್ಯವಶ್ಯಕತೆ ಇದ್ದು ಈ ನಿಟ್ಟಿನಲ್ಲಿ ಸಹಕಾರ ನೀಡಿದ ಅಚೀವರ್ಸ್ ಶಾಲೆ ಹಾಗೂ ಆರೋಗ್ಯ ಇಲಾಖೆ ಎಲ್ಲರಿಗೂ ಧನ್ಯವಾದಗಳು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಂತ ಡಾ.ಶಿಲ್ಪ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಶಾಲೆಯ ಪ್ರಾಂಶುಪಾಲರಾದ ವಿದ್ಯಾ, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ರೋಟರಿ ಮಾಜಿ ಅಧ್ಯಕ್ಷರಾದ ರೊ.ಬರ್ನಾಡಪ್ಪ ಇನ್ನಿತರರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!