ಆಗಸ್ಟ್ 1 ವಿಶ್ವ ಸ್ಕಾರ್ಫ್ ಡೇ ಅಥವಾ ವರ್ಲ್ಡ್ ಶೈನ್ ಡೇ ಆಚರಣೆ ಕಾರ್ಯಕ್ರಮವು ಮಂಡ್ಯ ತಾಲ್ಲೂಕಿನ ಬೇಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಮಂಡ್ಯ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮುಖ್ಯ ಆಯುಕ್ತ ಟಿ ವರಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿವರ್ಷ ಆಗಸ್ಟ್ 1 ರಂದು ಪ್ರಪಂಚದಾದ್ಯಂತ ವಿಶ್ವ ಸ್ಕಾರ್ಫ್ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕವಾಗಿ ಸ್ಕಾರ್ಫ್ ಧರಿಸುವ ಮೂಲಕ ಸ್ಕೌಟ್ಸ್ ಮತ್ತು ಗೈಡ್ಸ್ ನ ಹೆಮ್ಮೆಯನ್ನು ಪ್ರದರ್ಶಿಸುವ ದಿನ ಆಗಸ್ಟ್ 1 ಆಗಿದೆ ಎಂದರು.

ಒಮ್ಮೆ ಸ್ಕೌಟ್ಸ್ ಅಥವಾ ಗೈಡ್, ಯಾವಾಗಲೂ ಸ್ಕೌಟ್ಸ್ ಮತ್ತು ಗೈಡ್ ಎಂದು ತಿಳಿಸುತ್ತಾ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ನಡೆದು ಬಂದ ಹಾದಿಯನ್ನು ಸಂಕ್ಷಿಪ್ತವಾಗಿ ವಿವರಿಸಿದರು.
ಶಾಲೆಯ ವಿದ್ಯಾರ್ಥಿನಿ ಉನ್ನತಿ ಪ್ರತಿಜ್ಞೆಯನ್ನು ಬೋಧಿಸಿದರು. ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷ ಉಮೇಶ್
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಪವಿತ್ರ ಕೆ.ಎಂ., ಶಾಲೆಯ ಶಿಕ್ಷಕ ವೃಂದದವರು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.




