Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿಶ್ವ ಹಿರಿಯ ನಾಗರೀಕರ ದಿನಾಚರಣೆ: ಕ್ರೀಡಾ- ಸಾಂಸ್ಕೃತಿಕ ಕಾರ್ಯಕ್ರಮ

ಮಂಡ್ಯ ನಗರದ ಸರ್.ಎಂ.ವಿ ಕ್ರೀಡಾಂಗಣದಲ್ಲಿ ಮಂಡ್ಯ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2023-24ನೇ ಸಾಲಿನ ವಿಶ್ವ ಹಿರಿಯ ನಾಗರೀಕರ ದಿನಾಚರಣೆಯ ಪ್ರಯುಕ್ತ 60 ವರ್ಷ ಮೇಲ್ಪಟ್ಟ ಪುರುಷ ಹಾಗೂ ಮಹಿಳೆಯರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮವನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಾದ ರೋಹಿತ್ ಉದ್ಘಾಟಿಸಿ ಮಾತನಾಡಿ, ಕ್ರೀಡೆಯನ್ನು ಸ್ಪರ್ಧಾತ್ಮಕವಾಗಿ ಸ್ವೀಕರಿಸಿ ಹಿರಿಯ ನಾಗರೀಕರು ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದರು.

ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳುವುದರ ಜೊತೆಗೆ ಸದಾ ಕಾಲ ಚಟುವಟಿಕೆಯಿಂದ ಇರಬಹುದು.ಹೀಗಾಗಿ ಕ್ರೀಡೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕೆಂದರು. ಇಂದು ಈ ಕ್ರೀಡೆಯಲ್ಲಿ 60 ರಿಂದ 80 ವರ್ಷದ ವಯಸ್ಸಿನವರೆಗೂ ಸಹ ಪುರುಷರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದರ ಬಗ್ಗೆ ತಮ್ಮ ಸಂತಸವನ್ನು ಹಂಚಿಕೊಂಡರು.

ಇಂದು ಪುರುಷರು ಹಾಗೂ ಮಹಿಳೆಯರಿಗಾಗಿ ವೇಗದ ನಡಿಗೆ, ಮ್ಯೂಸಿಕಲ್ ಚೇರ್ ಹಾಗೂ ರಿಂಗ್ ಅನ್ನು ಬಕೆಟ್ ನಲ್ಲಿ ಎಸೆಯುವ ಸ್ಪರ್ಧೆಗಳು ನಡೆಯಿತು. ಈ ಸಂದರ್ಭದಲ್ಲಿ ನಿವೃತ್ತ ಸಿ.ಡಿ.ಪಿ.ಓ ಟಿ.ಕೆ. ಪುಟ್ಟಸ್ವಾಮಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿದ್ದಪ್ಪ, ಸೇವಾ ಕಿರಣ ವೃದ್ಧಾಶ್ರಮದ ರಾಜಣ್ಣ, ಸೇವಾಕಿರಣ ವೃದ್ಧಾಶ್ರಮದ ವಿಜಯಕುಮಾರ್, ದ್ವಾರಕ ಬಡಾವಣೆಯ ನಿವಾಸಿಗಳ ಸಂಘದ ಅಧ್ಯಕ್ಷ ಎಚ್.ಎಂ. ಬಸವರಾಜು, ಎ.ಜಿ.ಜಿ ವೃದ್ಧಾಶ್ರಮದ ಅಧ್ಯಕ್ಷ ಆತ್ಮಾನಂದ, ಅರಕೆರೆ ಗ್ರಾಮದ ವೃದ್ಧಾಶ್ರಮದ ನಟರಾಜು ಹಾಗೂ ವೈದ್ಯರಾದ ಡಾ. ಸ್ಪೂರ್ತಿ ಇನ್ನಿತರದಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!