Thursday, September 19, 2024

ಪ್ರಾಯೋಗಿಕ ಆವೃತ್ತಿ

ಆತ್ಮಹತ್ಯೆ ಎಂಬುದು ಸಮಾಜದ ಸ್ವಾಸ್ಥ್ಯಕ್ಕೆ ಮಾರಕ: ಹೇಮಾಶ್ರೀ

ಆತ್ಮಹತ್ಯೆ ಎಂಬುದು ಸಮಾಜದ ಸ್ವಸ್ಯಕ್ಕೆ ಮಾರಕ ಅದನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಂಡ್ಯ ಜಿಲ್ಲಾ ದ್ವಿತೀಯ ದರ್ಜೆ ನ್ಯಾಯಾಲಯದ ನ್ಯಾಯಾಧೀಶರಾದ ಹೇಮಾಶ್ರೀ ತಿಳಿಸಿದರು.

ಮಂಡ್ಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯನ್ನು ಕ್ರಿಯಾತ್ಮಕ ಕಾರ್ಯಗಳ ಮೂಲಕ ಭರವಸೆ ಮೂಡಿಸೋಣ ಎಂಬ ಘೋಷಣೆಯಡಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಾಥ ಕಾರ್ಯಕ್ರಮಕ್ಕೆ ಚಾಲನೆ ಅವರು ಮಾತನಾಡಿದರು.

ವಿಶ್ವದಲ್ಲಿ ಪ್ರತಿವರ್ಷ 7 ಲಕ್ಷಕ್ಕೂ ಹೆಚ್ಚು ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಭಾರತದಲ್ಲಿ ಪ್ರತಿವರ್ಷ 1.64 ಲಕ್ಷಕ್ಕೂ ಹೆಚ್ಚು ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಅದರಲ್ಲಿ ಶೇಕಡ 35 ರಷ್ಟು 15 ರಿಂದ 24 ವರ್ಷದ ವಯೋಮಾನದವರು ಕಂಡುಬರುತ್ತಿದ್ದಾರೆ ಇದರಿಂದ ಎಲ್ಲಾ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹೆಚ್ಚು-ಹೆಚ್ಚು ನಡೆಯಬೇಕು ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಡಾ.ಸೋಮಶೇಖರ್ ಮಾತನಾಡಿ, ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ ಅದನ್ನು ಎದುರಿಸಿ ನಿಂತಾಗ ನಮ್ಮ ಬದುಕು ಸುಗಮವಾಗುತ್ತದೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಪ್ರತಿವರ್ಷ ಸಾವಿರಕ್ಕೂ ಹೆಚ್ಚು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಗಳು ಕಂಡು ಬರುತ್ತವೆ. ಈ ವರ್ಷ ಏಪ್ರಿಲ್ ನಿಂದ ಆಗಸ್ಟ್ ವರೆಗೆ 600 ಪ್ರಕರಣಗಳು ಕಂಡುಬಂದಿವೆ ಎಂದರು. ಇದಕ್ಕೆ ಕಾರಣ ಖಿನ್ನತೆ, ಕೌಟುಂಬಿಕ ಸಮಸ್ಯೆ, ಹದಿಹರೆಯದ ನಿರ್ಧಾರಗಳಾಗಿವೆ. ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ ಎಂಬುದರ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಇದನ್ನು ತಡೆಗಟ್ಟಲು ಪ್ರತಿಯೊಂದು ಇಲಾಖೆಯ ಸಹಯೋಗ ಪ್ರಮುಖವಾಗಿರುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಕಾಂತರಾಜ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿಗಳಾದ ಡಾ.ಶಶಿಧರ್ ಕೆ.ಆರ್ ಸೇರಿದಂತೆ ಇನ್ನಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!