Thursday, November 19, 2026

ಪ್ರಾಯೋಗಿಕ ಆವೃತ್ತಿ

ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ- ಬೆನ್ನೂರ

ಇತ್ತೀಚಿನ ದಿನಗಳಲ್ಲಿ ಯುವ ಜನರಲ್ಲಿ ಆತ್ಮಹತ್ಯೆಯ ಪ್ರಮಾಣ ಹೆಚ್ಚುತ್ತಿರುವದು ಆತಂಕಕಾರಿ ಆಗಿದೆ ಸಕಲ ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲವೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ ಹೇಳಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಟಿ ಎಂ ಹೊಸೂರು ಗ್ರಾಮದ ಜ್ಞಾನ ವಾಹಿನಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಟಿ ಎಂ ಹೊಸೂರು ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವತಿಯಿಂದ ಆಯೋಜಿಸಿದ್ದ “ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯ ಸಪ್ತಾಹ” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಬಿಡುವಿಲ್ಲದ ಜೀವನಶೈಲಿ ಮತ್ತು ಒತ್ತಡ ಮುಂತಾದ ಕಾರಣಗಳಿಂದ ಜನರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಂತಹ ಪ್ರಕರಣಗಳ ತಡೆಯಲು ಮತ್ತು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸುವವರ ಮನ: ಪರಿವರ್ತನೆ ಮಾಡಲು ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಇಂತಹ ಜಾಗೃತಿ ಸಪ್ತಾಹ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದರು.

ಬದುಕಿನಲ್ಲಿ ಅವಕಾಶಗಳು ಸಾವಿರಗಳಿವೆ, ಅವಕಾಶಗಳನ್ನು ಕಳೆದುಕೊಂಡು ಆತ್ಮಹತ್ಯೆ ಮಾಡಿ ಕೊಳ್ಳಬಾರದು, ಯಾವುದೇ ಮಾನಸಿಕ ಆರೋಗ್ಯ ಸಮಸ್ಯೆಗಳು ಇದ್ದಲ್ಲಿ ಆಪ್ತ ಸಮಾಲೋಚಕರೊಂದಿಗೆ ತಮ್ಮ ಭಾವನೆಗಳನ್ನು ಮತ್ತು ಗೊಂದಲಗಳನ್ನು ಶುಲ್ಕ ರಹಿತ ಸಹಾಯವಾಣಿ ಸಂಖ್ಯೆ 14416 ಕರೆ ಮಾಡಿ ಸಲಹೆ ಪಡೆಯಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆಡಳಿತ ವೈದ್ಯಾಧಿಕಾರಿ ಟಿ ಜೆ ತಾರಾ ,ಶಾಲಾ ಶಿಕ್ಷಕರಾದ ನಟರಾಜ್  , ಕೆ ಎಸ್ ನಂದೀಶ್ , ಹೆಚ್ ಎನ್ ಹೇಮಾವತಿ, ಹೆಚ ಎನ್ ಕಿರಣ್ ಕುಮಾರ, ಕೆ ಬಿ ಲತಾ, ಪಿ ಬಸವರಾಜ್ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಸುವರ್ಣ, ಫಾರ್ಮಸಿ ಅಧಿಕಾರಿ ಪ್ರದೀಪ್ ,ಆಶಾ ಕಾರ್ಯಕರ್ತೆಯರಾದ ಶೋಭಾ, ವಿದ್ಯಾಮಣಿ ಹಾಗೂ ಶಾಲಾ ಮಕ್ಕಳು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ