Friday, September 20, 2024

ಪ್ರಾಯೋಗಿಕ ಆವೃತ್ತಿ

ಮೈಸೂರು| ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಮಂಡ್ಯ ‘ಕೈ’ ಅಭ್ಯರ್ಥಿ ಸ್ಟಾರ್ ಚಂದ್ರು

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿಗೆ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದರು.

ದೇವಿಗೆ ಸೀರೆ, ಅರಿಶಿನ, ಕುಂಕುಮ, ಬಳೆ ಹಾಗೂ ಕಾಣಿಕೆಯನ್ನು ನೀಡಿ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದರು.

ದೇವಿಯ ದರ್ಶನದ ಬಳಿಕ ಮಾತನಾಡಿದ ವೆಂಕಟರಮಣಗೌಡ ಅವರು, ನಾಡಿನ ಸಮಸ್ತ ಜನರ ಬಾಳಲ್ಲಿ ಸುಖ, ಸಮೃದ್ಧಿ ನೆಲೆಸಲ್ಲಿ. ಉತ್ತಮ ಮಳೆ, ಬೆಳೆಯಾಗಲಿ ಎಂದು ತಾಯಿ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಲಾಯಿತು ಎಂದರು.

ಇದೇ ವೇಳೆ ಮಾತನಾಡಿದ ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು, ಲೋಕ ಕಲ್ಯಾಣರರ್ಥ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ರಾಜ್ಯದಲ್ಲಿ ಅತಿ ಹೆಚ್ಚು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಗೋಪಾಲ್, ಮುನೇಗೌಡ ಸೇರಿದಂತೆ ಹಲವರು ಜೊತೆಯಲ್ಲಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!