Saturday, November 21, 2026

ಪ್ರಾಯೋಗಿಕ ಆವೃತ್ತಿ

ಕುಸ್ತಿ ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗ : ಡಾ.ಕುಮಾರ

ಪ್ರತಿ ವರ್ಷ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮ ಅಂಗವಾಗಿ ಗ್ರಾಮೀಣ ಕ್ರೀಡೆಯಾದ ಕುಸ್ತಿಯನ್ನು ಆಯೋಜಿಸಲಾಗುತ್ತಿದೆ, ಕುಸ್ತಿ ನಮ್ಮ ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ  ಹೇಳಿದರು.

ಇಂದು ( ಸೆ.27) ರಂದು ಶ್ರೀರಂಗಪಟ್ಟಣ ದಸರಾ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕುಸ್ತಿ ಪಂದ್ಯಾವಳಿಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಆಧುನಿಕ ಯುಗದಲ್ಲಿ ಹೊಸ ಹೊಸ ಕ್ರೀಡೆಗಳು ಬೆಳೆಯುತ್ತಿರುವ ಹೊತ್ತಿನಲ್ಲಿ ಗ್ರಾಮೀಣ ಕ್ರೀಡೆಯಾದ ಕುಸ್ತಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ವಿಷಾದಿಸಿದರು.

ಕುಸ್ತಿ ಹಾಗೂ ಕುಸ್ತಿಪಟುಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಕುಸ್ತಿ ಪಂದ್ಯವನ್ನು ಹಮ್ಮಿಕೊಳ್ಳಲಾಗಿದೆ. ಪ್ರಸ್ತುತ ಎಲ್ಲರೂ ಗ್ರಾಮೀಣ ಕ್ರೀಡೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು, ಎಷ್ಟೇ ಆಧುನಿಕವಾಗಿ ಮುಂದುವರೆದರು ಗ್ರಾಮೀಣ ಬದುಕನ್ನು ಮರೆಯಬಾರದು, ಕ್ರೀಡಾ ಪಟುಗಳು ಅತ್ಯಂತ ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸಿ, ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ ಎಂದು ತಿಳಿ ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ ಮಾತನಾಡಿ ಮಹಾರಾಜರ ಕಾಲದಿಂದಲೂ ಕುಸ್ತಿ ಪಂದ್ಯಗಳನ್ನು ಆಯೋಜಿಸಲಾಗುತ್ತಿತ್ತು, 2008 ರಿಂದ ಶ್ರೀರಂಗಪಟ್ಟಣ ದಸಾರ ಕಾರ್ಯಕ್ರಮದಲ್ಲಿ ವಿಶೇಷವಾಗಿ ಕುಸ್ತಿಯನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ, ಈಗಲೂ ಸಹ ಪ್ರತಿ ಊರಿನಲ್ಲೂ ಐದರಿಂದ ಆರು ಕುಸ್ತಿಪಟುಗಳು ಸಿಗುತ್ತಾರೆ, ಕುಸ್ತಿಯಂತಹ ಗ್ರಾಮೀಣ ಕ್ರೀಡೆಗಳನ್ನು ಬೆಳೆಸಬೇಕು, ಕ್ರೀಡೆಯಲ್ಲಿ ಸಕ್ರಿಯವಾಗಿರುವುದರಿಂದ ದೈಹಿಕ ದೃಢತೆ ಮತ್ತು ಆರೋಗ್ಯಕರ ಜೀವನ ನಡೆಸಬಹುದು ಎಂದು ಹೇಳಿದರು.

ನಂತರ ಜಿಲ್ಲಾಧಿಕಾರಿ ಡಾ ಕುಮಾರ, ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ಜಿಲ್ಲಾ ವಾರ್ತಾಧಿಕಾರಿ ಎಸ್ ಎಚ್ ನಿರ್ಮಲಾ ಅವರು ಕುಸ್ತಿಪಟುಗಳಿಗೆ ಶುಭಹಾರೈಸಿ ಕುಸ್ತಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀರಂಗಪಟ್ಟಣದ ಪುರಸಭೆಯ ಅಧ್ಯಕ್ಷ ದಿನೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಾಗಭೂಷಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ