Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಯಲಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ನವೀನ್‌ಕುಮಾರ್ ಆಯ್ಕೆ

ಮಂಡ್ಯ ತಾಲೂಕಿನ ಯಲಿಯೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ನವೀನ್‌ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಮದ್ದೂರಮ್ಮ ಆಯ್ಕೆಯಾದರು.

ಹದಿನೈದು ಸದಸ್ಯಬಲ ಹೊಂದಿರುವ ಪಂಚಾಯಿತಿಯಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಎಂಟು ಮತಗಳನ್ನು ಪಡೆದು ವಿಜಯಶಾಲಿಯಾದರು. ವಿರೋಧಿ ಬಣದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ಆರ್.ಲೋಕೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ನಾಗಮ್ಮ ತಲಾ ಏಳು ಮತಗಳನ್ನು ಪಡೆದು ಪರಾಭವಗೊಂಡರು.

ಜಾಹೀರಾತು

ಬುಧವಾರ ಒಂದು ಗಂಟೆಗೆ ಆರಂಭಗೊಂಡ ಮತದಾನ ಪ್ರಕ್ರಿಯೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಪಿಡಿಓ ಪ್ರಸನ್ನ ನಡೆಸಿಕೊಟ್ಟರು. ಪಿಎಸ್ಐ ಕರುಣಾಮೂರ್ತಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಸದಸ್ಯರು ಹಾಗೂ ಮುಖಂಡರಾದ ಕೆ.ಟಿ ತಿಮ್ಮೇಗೌಡ, ಯಂಡಮೂರಿ ಕುಮಾರ್, ನಿಂಗಣ್ಣ, ವೈ.ಎಲ್.ರವಿ ಮುಂತಾದವರು ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!