Thursday, September 19, 2024

ಪ್ರಾಯೋಗಿಕ ಆವೃತ್ತಿ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಸದುಪಯೋಗಕ್ಕೆ ಸಲಹೆ

ಆರೋಗ್ಯ ರಕ್ಷಣಾ ಯೋಜನೆಯಾದ ಯಶಸ್ವಿನಿ ಯೋಜನೆಗೆ ನೋಂದಾಯಿಸಿಕೊಂಡು ಸಾರ್ವಜನಿಕರು, ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶೋಭಾ ಸಲಹೆ ನೀಡಿದರು.

ಮಂಡ್ಯ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆಗಳ ಬಗ್ಗೆ ಗ್ರಾಮೀಣ ಜನರಿಗೆ ಜಾನಪದ ಸಂಗೀತದ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಮಂಡ್ಯ ತಾಲೂಕಿನ ಚಿಕ್ಕಬಳ್ಳಿ ಗ್ರಾಮದಲ್ಲಿ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸ ಸದಸ್ಯರ ನೋಂದಣಿ ಅವಧಿಯನ್ನು ಜನವರಿ 31ರವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರತಿಯೊಬ್ಬರು ಆರೋಗ್ಯ ದೃಷ್ಟಿಯಿಂದ ಯಶಸ್ವಿ ಕಾರ್ಡನ್ನು ತಪ್ಪದೆ ಮಾಡಿಸಿಕೊಳ್ಳಿ, ಈ ಕಾರ್ಡು ನಿಮ್ಮ ಬಳಿ ಇದ್ದರೆ ಐದು ಲಕ್ಷ ಆರೋಗ್ಯ ವಿಮೆ, ತಮ್ಮ ಬಳಿ ಇದ್ದಹಾಗೆ ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ., ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಉಚಿತವಾಗಿ ಯಶಸ್ವಿನಿ ಕಾರ್ಡನ್ನು ಮಾಡಿಕೊಡಲಾಗುತ್ತದೆ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ನಿತ್ಯ ಸ್ನೇಹಿ ಸಾಂಸ್ಕೃತಿಕ ಕಲಾತಂಡದವರಿಂದ ಜನಪದ ಗೀತೆಗಳು, ಸರ್ಕಾರದ ಯೋಜನೆಯ ಗೀತೆಗಳನ್ನು ಹಾಡುವ ಮೂಲಕ ಗ್ರಾಮೀಣ ಜನರಿಗೆ ಅರಿವು ಮತ್ತು ಜಾಗೃತಿಯನ್ನು ಮೂಡಿಸಲಾಯಿತು.

ವೇದಿಕೆಯಲ್ಲಿ ವೀಕ್ಷಣಾಧಿಕಾರಿ ಮಹದೇವ ಪ್ರಸಾದ್, ಆರೋಗ್ಯ ಇಲಾಖೆಯ ಆರೋಗ್ಯ ಸಹಾಯಕಿ ಶ್ರುತಿ, ಕಲಾವಿದರಾದ ನಿತ್ಯಸ್ನೇಹಿ ಕಲಾತಂಡದ ನಾಯಕ ಎಚ್ ಪಿ ವೈರಮುಡಿ, ವೈ ಬಿ ಹೋನ್ನೇಶ್, ದೀಪ, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!