Thursday, November 19, 2026

ಪ್ರಾಯೋಗಿಕ ಆವೃತ್ತಿ

ಯಶಸ್ವಿನಿ ಯೋಜನೆ:ಹೆಚ್ಚುವರಿ ಶುಲ್ಕ ಪಡೆದರೆ ಆಸ್ಪತ್ರೆಗಳಿಗೆ ದಂಡ

ಯಶಸ್ವಿನಿ ಯೋಜನೆಯ ನೊಂದಾವಣೆ ಆಸ್ಪತ್ರೆಗಳು ರೋಗಿಗಳಿಂದ ಹೆಚ್ಚುವರಿ ಶುಲ್ಕ ಪಡೆದಲ್ಲಿ ಅಂತಹ ಆಸ್ಪತ್ರೆಗಳಿಗೆ ನೋಟಿಸ್ ಜಾರಿಗೊಳಿಸಿ, ದಂಡ ವಿಧಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ಸದಸ್ಯ ಮಧು ಜಿ.ಮಾದೇಗೌಡ ಅವರ ಚುಕ್ಕೆ ರಹಿತ ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, ಆಂತಹ ಆಸ್ಪತ್ರೆಯ ಬಿಲ್ ಪಾವತಿಯ ಮೊತ್ತದಲ್ಲಿ ಹೆಚ್ಚುವರಿ ಶುಲ್ಕದ ಮೊತ್ತವನ್ನು ಕಟಾಯಿಸಿ ಸದರಿ ರೋಗಿಗಳಿಗೆ ಪಾವತಿಸಲಾಗುವುದು. ಒಂದು ವೇಳೆ, ಸದರಿ ಆಸ್ಪತ್ರೆಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸಿದಲ್ಲಿ ಈ ಆಸ್ಪತ್ರೆಗಳನ್ನು ಯಶಸ್ವಿನಿ ಯೋಜನೆಯ ನೆಟ್ ವರ್ಕ್ ಆಸ್ಪತ್ರೆಗಳ ಪಟ್ಟಿಯಿಂದ ತೆಗೆದು ಹಾಕಲಾಗುವುದು ಎಂದು ಹೇಳಿದ್ದಾರೆ.

ಮಂಡ್ಯ : 2,97305 ಸದಸ್ಯರ ನೋಂದಣಿ :
2022ರ ನವೆಂಬರ್‌ ತಿಂಗಳಿನಿಂದ ನೋಂದಣಿ ಆರಂಭಿಸಿದ್ದು ಇಲ್ಲಿಯವರೆಗೆ (ಗ್ರಾಮೀಣ/ನಗರ) ಮಂಡ್ಯ ಜಿಲ್ಲೆಯಲ್ಲಿ ಯಶಸ್ವಿನಿ ಯೋಜನೆಗೆ ಒಟ್ಟು 2,97,305 ಮಂದಿ ಸದಸ್ಯರು ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ಅವಧಿಯನ್ನು 2023ರ ಫೆಬ್ರವರಿ ಅಂತ್ಯದವರೆಗೂ ವಿಸ್ತರಿಸಿದ್ದು ನೋಂದಣಿ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದು ವಿವರಿಸಿದ್ದಾರೆ.

ಈ ಯೋಜನೆಯಡಿ ರಾಜ್ಯದಲ್ಲಿ ಇದುವರೆಗೂ ಒಟ್ಟು 34.39 ಲಕ್ಷ ಸಂಖ್ಯೆಯ ಸದಸ್ಯರು ನೋಂದಾಯಿಸಿಕೊಂಡಿದ್ದಾರೆ. ಒಟ್ಟು 373 ಆಸ್ಪತ್ರೆಗಳು ನೋಂದಣಿ ಮಾಡಿಕೊಂಡಿವೆ. 2023ರ ಜನವರಿ ಮಾಹೆಯಿಂದ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪ್ರಾರಂಭವಾಗಿದ್ದು ಇಲ್ಲಿಯವರೆಗೆ ಚಿಕಿತ್ಸೆ ಪಡೆದವರ ಸಂಖ್ಯೆ 1,685 ಇದ್ದು, ಈ ಸೌಲಭ್ಯವನ್ನು 203 ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಯಶಸ್ವಿನಿ ಫಲಾನುಭವಿಗಳು ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಅಲ್ಲದೇ, ಪರಿಷ್ಕೃತ ಯಶಸ್ವಿನಿ ಯೋಜನೆಯಡಿ ಪ್ರಸ್ತುತ ಆಯುಷ್ಮಾನ್ ಭಾರತ್ ಯೋಜನೆಯಡಿ ಅಳವಡಿಸಿ ಕೊಂಡಿರುವ ಎಲ್ಲಾ 1,650 ಚಿಕಿತ್ಸೆಗಳನ್ನು ಅದೇ ದರಗಳೊಂದಿಗೆ ಅಳವಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ