ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆದ ಯಶ್ಪಾಲ್ ಸುವರ್ಣ ಅವರಿಗೆ ಜೀವ ಬೆದರಿಕೆ ಹಾಕಿದವರನ್ನು ಬಂಧಿಸಿ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಬಿ.ರಮೇಶ್ ಒತ್ತಾಯಿಸಿದರು
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣರವರಿಗೆ ಸಾಮಾಜಿಕ ಜಾಲತಾಣದಲ್ಲಿ marigudi instagram ಖಾತೆಯ ಮೂಲಕ ಜೀವ ಬೆದರಿಕೆ ಒಡ್ಡಿದ್ದಾರೆ.
ಅವರನ್ನು ಹತ್ಯೆಗೈದವರಿಗೆ ಹತ್ತು ಲಕ್ಷ ರೂಪಾಯಿಗಳನ್ನು ನೀಡಿರುವುದಾಗಿ ಘೋಷಿಸಿರುವ ಸಂದೇಶವು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಹಾಗೂ ಆ ಮೂಲಕ ಕೋಮು ಗಲಭೆಯ ಸಂಚು ರೂಪಿಸಿ ಸಮಾಜದ ಶಾಂತಿ ಕದಡುವ ಪ್ರಯತ್ನ ಮಾಡಿದ್ದು, ಕೂಡಲೇ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸರ್ಕಾರ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಅವರಿಗೆ ಸೂಕ್ತ ಭದ್ರತೆಯನ್ನು ನೀಡಬೇಕೆಂದು ಆಗ್ರಹಿಸಿದರು.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ ಅವರಿಗೆ ಹಿಂದುಳಿದ ವರ್ಗಗಳ ಮತದಾರರು ಮತ ನೀಡುವಂತೆ ಮನವಿ ಮಾಡಿದರು.
ಜಿಲ್ಲಾ ಉಪಾಧ್ಯಕ್ಷ ಸಿದ್ದು, ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್, ಸೌಮ್ಯಾ ಶ್ರೀನಿವಾಸ್, ಶಿವಣ್ಣ,ಲಿಂಗರಾಜು, ನಾಗಾನಂದ ಉಪಸ್ಥಿತರಿದ್ದರು.