Saturday, May 18, 2024

ಪ್ರಾಯೋಗಿಕ ಆವೃತ್ತಿ

ವಿಜಯೇಂದ್ರ ಸ್ಪರ್ಧಿಸಿದರೂ ನಾವು ಫೈಟ್ ಮಾಡಲು ಸಿದ್ಧರಿದ್ದೇವೆ : ಯತೀಂದ್ರ ಸಿದ್ದರಾಮಯ್ಯ

ರಾಜ್ಯದ ಯಾವುದೇ ಕ್ಷೇತ್ರದಿಂದ ನಾನು ಈ ಬಾರಿ ಚುನಾವಣೆಯಲ್ಲಿ  ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಯತೀಂದ್ರ ಸಿದ್ದರಾಮಯ್ಯ, ವರುಣ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಇಲ್ಲಿ ನಮ್ಮ ಗೆಲವು ನಿಶ್ಚಿತ. ಹಾಗಾಗಿ ಬಿ.ವೈ.ವಿಜಯೇಂದ್ರ ಸೇರಿದಂತೆ ಯಾರೇ ಸ್ಪರ್ಧಿಸಿದರೂ ನಾವು ಫೈಟ್ ಮಾಡಲು ಸಿದ್ಧರಿದ್ದೇವೆ ಎಂದು ಅವರು ತಿಳಿಸಿದರು.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ವರುಣಾ ಸೇರಿದಂತೆ ಯಾವ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವುದಿಲ್ಲ. ” ತಂದೆ, ವಿಪಕ್ಷನಾಯಕ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟಿರುವ ಯತೀಂದ್ರ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆ ಉದ್ಭವವಾಗಿತ್ತು. ಆದರೆ ಈಗ ಚುನಾವಣಾ ಅಖಾಡದಿಂದಲೇ ಹಿಂದೆ ಸರಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ವರುಣಾ ಕ್ಷೇತ್ರ ಅಥವಾ ಬೇರೆ ಯಾವ ಕ್ಷೇತ್ರದಿಂದಲೂ ನಾನು ಸ್ಪರ್ಧೆ ಮಾಡಲ್ಲ. ತಂದೆಯವರ ಪರವಾಗಿ ಜನವರಿಯಿಂದಲೇ ನಾನು ಪ್ರಚಾರ ಶುರು ಮಾಡಿದ್ದೇನೆ. ವರುಣಾ ಕ್ಷೇತ್ರ ಯಾವೊಬ್ಬ ವ್ಯಕ್ತಿಗೆ ಸೇರಿದ್ದಲ್ಲ. ತಂದೆಗಾಗಿ ನಾನು ಕ್ಷೇತ್ರ ತ್ಯಾಗ ಮಾಡಿಲ್ಲ. ವರುಣಾ ಕ್ಷೇತ್ರ ಸೇರಿದ್ದು ಆ ಕ್ಷೇತ್ರದ ಮತದಾರರಿಗೆ. ತಂದೆಯವರ ಕೊನೆ ಚುನಾವಣೆ ಹೀಗಾಗಿ ವರುಣಾದಲ್ಲಿ ನಿಲ್ಲಬೇಕೆಂಬುದು ಜನರ ಅಭಿಪ್ರಾಯ ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!