Thursday, September 19, 2024

ಪ್ರಾಯೋಗಿಕ ಆವೃತ್ತಿ

ಲೋಕಸಭಾ ಚುನಾವಣೆಯಲ್ಲಿ ”ಕಮಲ – ಹೊರೆ ಹೊತ್ತ ಮಹಿಳೆ” ಮೈತ್ರಿ : ಯಡಿಯೂರಪ್ಪ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದು ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಸರ್ಕಾರದ ವಿರುದ್ಧ ಗ್ಯಾರಂಟಿ ಜಾರಿ ವಿಚಾರವಾಗಿ ಪ್ರತಿಭಟನೆ ಮಾಡುತ್ತಿದೆ. ಈ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ”ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್ ಒಟ್ಟಿಗೆ ಸೇರಿ ಹೋರಾಟ ಮಾಡುವ ವಿಚಾರ ಸತ್ಯ. ಈ ಹಿಂದೆ ಕುಮಾರಸ್ವಾಮಿ ಹೇಳಿದ್ದಾರೆ ಎನ್ನಲಾದ ಹೇಳಿಕೆ ನಿಜ” ಎಂದು ಹೇಳಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಿಜೆಪಿ ಗಂಭೀರ ಚಿಂತನೆ ನಡೆಸಿ ಒಂದು ಹಂತಕ್ಕೆ ಬಂದಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಮುಂದಾಗುವ ಸಾಧಕ ಮತ್ತು ಬಾಧಕಗಳ ಬಗ್ಗೆ ಬಿಜೆಪಿ ನಾಯಕರು ಈಗಾಗಲೇ ಚರ್ಚೆ ನಡೆಸಿ ಕೊನೆಗೆ ದಳಪತಿಗಳ ಜತೆ ಮೈತ್ರಿಗೆ ಒಲವು ತೋರಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಕಟ್ಟಿಹಾಕಲು ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಈಗಾಗಲೇ ಸಾಧಕ ಬಾಧಕಗಳ ಬಗ್ಗೆ ಎರಡೂ ಪಕ್ಷಗಳಲ್ಲಿ ಚರ್ಚೆ ಆಗಿದ್ದು, ಬಿಜೆಪಿ ಹಾಗೂ ಜೆಡಿಎಸ್ ಮತಗಳು ಕ್ರೂಢೀಕರಣವಾದರೆ ಕಾಂಗ್ರೆಸ್ ಮಣಿಸಲು ಸುಲಭ ಎಂದು ಎರಡೂ ಪಕ್ಷಗಳ ನಾಯಕರ ಲೆಕ್ಕಾಚಾರವಾಗಿದೆ. 20ರಿಂದ 22 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಸಲು ಚಿಂತನೆ ನಡೆಸಿದೆ. ಇನ್ನುಳಿದಂತೆ 6ರಿಂದ 8 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವ ಮಾತುಕತೆಗಳು ನಡೆದಿವೆ ಎನ್ನಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!