Thursday, November 19, 2026

ಪ್ರಾಯೋಗಿಕ ಆವೃತ್ತಿ

ದೂರ ತಳ್ಳಿದ್ದ BSYರನ್ನೇ ಮತ್ತೆ ಆಶ್ರಯಿಸಿದ್ದು ಬಿಜೆಪಿಯ ಶೋಚನೀಯ ಸ್ಥಿತಿಗೆ ಹಿಡಿದ ಕನ್ನಡಿ – ಕಾಂಗ್ರೆಸ್ ವ್ಯಂಗ್ಯ

ರಾಜಕೀಯದಿಂದ ದೂರ ತಳ್ಳಿದ್ದ BSYರನ್ನೇ ಮತ್ತೆ ಆಶ್ರಯಿಸಿದ್ದು ಬಿಜೆಪಿಯ ಶೋಚನೀಯ ಸ್ಥಿತಿಗೆ ಹಿಡಿದ ಕನ್ನಡಿ. ಅಗತ್ಯವಿದ್ದಾಗ ಕಾಲು ಹಿಡಿಯುವುದು, ಅಗತ್ಯವಿಲ್ಲದಾಗ ಕಾಲು ಎಳೆಯುವುದು ಬಿಜೆಪಿ ಸಂಸ್ಕೃತಿ! ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

“>

 

ಯಡಿಯೂರಪ್ಪರನ್ನು ಕಣ್ಣೀರು ಹಾಕಿಸಿ ಪದಚ್ಯುತಿಗೊಳಿಸಿ ನಂತರ ವಯಸ್ಸಿನ ಕಾರಣ ನೀಡಿದ ಬಿಜೆಪಿ ಈಗ ರಾಜಕೀಯ ಕಾರಣಕ್ಕಾಗಿ ಅವರನ್ನು ಫ್ರಿಡಂ ಪಾರ್ಕಿನಲ್ಲಿ, ಬಿಸಿಲು, ಮಳೆಯಲ್ಲಿ ಕೂರಿಸುತ್ತಿರುವುದು ನಾಚಿಕೆಗೇಡು. ಅಧಿಕಾರ ನಡೆಸಲು ಮಾತ್ರ ಅವರಿಗೆ ವಯಸ್ಸಾಗಿತ್ತೇ, ಈಗ ಅವರಿಗೆ ಹದಿನೆಂಟರ ಹರೆಯವೇ ಬೇಕಾದಾಗ ಬಳಸಿ, ಬೇಡವಾದಾಗ ಬಿಸಾಡುವುದಕ್ಕೆ BSY ಅವರನ್ನು ಟಿಶ್ಯು ಪೇಪರ್ ಎಂದುಕೊಂಡಿದೆಯೇ ಬಿಜೆಪಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ