ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮವು ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಯೋಗ ದಿನಾಚರಣೆಯಲ್ಲಿ ಭಾಗವಹಿಸುವ ಯೋಗಪಟುಗಳು ಹೇಗೆ ತಯಾರಿ ಮಾಡಿಕೊಳ್ಳಬೇಕೆಂದು ಅಧಿಕಾರಿಗಳೊಂದಿಗೆ ಚರ್ಚಿಸಿ ಅವರು ಯೋಗ ದಿನಾಚರಣೆ ಯಶಸ್ವಿಯಾಗಲು ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಪಾಂಡವಪುರ ಉಪ ವಿಭಾಗಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ, ತಹಶೀಲ್ದಾರ್ ಶ್ವೇತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.