ಮಂಡ್ಯ ನಗರದ ವಿದ್ಯಾಗಣಪತಿ ದೇವಾಲಯದಲ್ಲಿ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಚ್.ಎನ್.ಯೋಗೇಶ್ ಜನ್ಮದಿನ ಪ್ರಯುಕ್ತ ಮಾಜಿ ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಬೆಂಬಲಿಗರು ಮತ್ತು ಹಿತೈಷಿಗಳು ವಿಶೇಷ ಪೂಜೆ ಸಲ್ಲಿಸಿ, ವಿವಿಧ ಸೇವಾ ಕಾರ್ಯಗಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ಕಾರ್ಯದರ್ಶಿ ಲೋಕೇಶ್ ಚಂದಗಾಲು ಮಾತನಾಡಿ, ಮಂಡ್ಯ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಎಚ್.ಎನ್.ಯೋಗೇಶ್ ಅವರು ಸಮಾಜ ಸೇವಾಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಿಸಿಕೊಂಡಿದ್ದಾರೆ, ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಕ್ಷೇತ್ರದ ಜನತೆಯ ಸಮಸ್ಯೆಗಳಿಗೆ ತಮ್ಮ ಕೈಲಾದ ನೆರವು, ಅಭಿವೃದ್ದಿಗೆ ಶ್ರಮಿಸಿದ್ದಾರೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿನ ರಾಜಕೀಯ ಭವಿಷ್ಯ ಮತ್ತು ಆಯುಸ್ಸು ಆರೋಗ್ಯ ವೃದ್ದಿಗಾಗಿ ಮೌನಸಾಧಕ ಮಾಜಿ ಶಾಸಕರಾದ ಎಂ.ಶ್ರೀನಿವಾಸ್ ಮಾರ್ಗದರ್ಶನದಲ್ಲಿ ಇಂದು ವಿವಿಧ ಸೇವಾ ಕಾರ್ಯಗಳು ನಡೆಯುತ್ತಿವೆ, ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ಗಳಿಗೆ ಮಮತೆಯ ಮಡಿಲು ನಿತ್ಯ ದಾಸೋಹ ಕೇಂದ್ರದಲ್ಲಿ ಗರ್ಭಿಣಿ-ಬಾಣಂತಿ ಮತ್ತು ಪೋಷಕರಿಗೆ, ಅಗತ್ಯಯುಳ್ಳವರಿಗೆ ಪೌಷ್ಠಿಕಾಹಾರ ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಂ.ಶ್ರೀನಿವಾಸ್, ಮುಖಂಡರಾದ ರಮೇಶ, ಪುಟ್ಟಸ್ವಾಮಿ, ರಘು, ಶಿವಕುಮಾರ್, ಸುರೇಶ್, ಬಾಸ್ಕರ್, ಚೇತನ್ ಮತ್ತಿತರರಿದ್ದರು.




