Friday, September 20, 2024

ಪ್ರಾಯೋಗಿಕ ಆವೃತ್ತಿ

ಏ.26ಕ್ಕೆ ಮಂಡ್ಯದಲ್ಲಿ ಯೋಗಿ ಅದಿತ್ಯನಾಥ್ ರೋಡ್ ಶೋ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಏ.26ರಂದು ಮಂಡ್ಯ ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

26ರಂದು ಬೆಳಿಗ್ಗೆ 11 ಗಂಟೆಗೆ ಆಗಮಿಸುವ ಯೋಗಿ ಆದಿತ್ಯಾನಾಥ್ ಅವರು ಮಂಡ್ಯ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ನಗರದ ಹಲವು ಪ್ರಮುಖ ರಸ್ತೆಗಳಲ್ಲಿ ರೋಡ್‌ ಶೋ ನಡೆಸಲಿದ್ದಾರೆ.

ಮಂಡ್ಯ ನಗರದ ರಾಜೇಂದ್ರ ಪ್ರಸಾದ್ ರಸ್ತೆ (ಆರ್.ಪಿ. ರಸ್ತೆ), ಅಂಬೇಡ್ಕರ್ ವೃತ್ತ (ಕರ್ನಾಟಕ ಬಾರ್ ಸರ್ಕಲ್), ನೂರಡಿ ರಸ್ತೆ, ಹೊಸಹಳ್ಳಿ ವೃತ್ತ, ವಿಶ್ವೇಶ್ವರಯ್ಯ ರಸ್ತೆ (ವಿ.ವಿ. ರಸ್ತೆ) ಸೇರಿದಂತೆ ವಿವಿಧ ರಸ್ತೆಗಳಲ್ಲಿ ರೋಡ್‌ಶೋ ನಡೆಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವರು.

ವಿ.ವಿ. ರಸ್ತೆ ಮೂಲಕ ಮಹಾವೀರ ವೃತ್ತ, ಮೈಸೂರು-ಬೆಂಗಳೂರು ಹೆದ್ದಾರಿ ಮಾರ್ಗವಾಗಿ ಸಿಲ್ವರ್ ಜ್ಯೂಬಿಲಿ ಪಾರ್ಕಿನವರೆಗೆ ರೋಡ್‌ ಶೋ ನಡೆಸುವರು. ಬಳಿಕ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ನಡೆಯುವ ಬಿಜೆಪಿ ಕಾರ‍್ಯಕರ್ತರ ಬಹಿರಂಗ ಸಭೆಯಲ್ಲಿ ಭಾಗವಹಿಸಿ, ಎಲ್ಲ 7 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಸಮಕ್ಷಮದಲ್ಲಿ ಪ್ರಚಾರ ನಡೆಸಲಿದ್ದಾರೆ.

ಏ.25ರಂದೇ ಬೆಂಗಳೂರಿಗೆ ಆಗಮಿಸುವ ಯೋಗಿ ಆದಿತ್ಯಾನಾಥ್ ಅಂದು ರಾತ್ರಿ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದು, ಏ. 26ರಂದು ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!