ಮಂಡ್ಯದಲ್ಲಿ ನಡೆಯುತ್ತಿರುವ ಬೆಟ್ಟಿಂಗ್ ದಂಧೆಯಿಂದಾಗಿ ಹಲವಾರು ಯುವಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಈ ಬಗ್ಗೆ ಪೊಲೀಸರಿಗೆ ಗೊತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದಾರೆಂದು ರೈತಸಂಘ ಮಂಡ್ಯದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಳ್ಳಿ ಚಂದ್ರು ಆರೋಪಿಸಿದ್ದರು.
ಮಂಡ್ಯದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ದಂಧೆಯಿಂದ ಹಲವು ಕುಟುಂಬಗಳು ಬೀದಿ ಪಾಲಾಗುತ್ತಿವೆ, ಇವುಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಜಿಲ್ಲಾಧ್ಯಕ್ಷ ಹೆಚ್.ಡಿ.ಜಯರಾಂ ಮಾತನಾಡಿ, ಬೆಟ್ಟಿಂಗ್, ಗಾಂಜಾ ಹಾಗೂ ಹುಕ್ಕಾ ಪ್ರಕರಣಗಳು ಮಂಡ್ಯದಲ್ಲಿ ನಡೆಯುತ್ತಿವೆ, ಇದರಲ್ಲಿ ಪೊಲೀಸರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ, ಕೂಡಲೇ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡು ತಪ್ಪಿತಸ್ಥರನ್ನು ಬಂಧಿಸಬೇಕೆಂದು ಆಗ್ರಹಿಸಿದರು.




