ಕುಡಿದ ಅಮಲಿನಲ್ಲಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ತಾಲ್ಲೂಕಿನ ಚನ್ನಪ್ಪನದೊಡ್ಡಿ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ನಾರಾಯಣ ಎಂಬುವವರ ಪುತ್ರ ಸುರೇಶ(24) ಮೃತಪಟ್ಟವರು.
ವಿಪರೀತ ಕುಡಿತದ ಚಟ ಹೊಂದಿದ್ದ ಯುವಕ ಹೊಟ್ಟೆನೋವಿನಿಂದ ಬಳಲುತ್ತಿದ್ದ. ಈ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದು, ಸಂಬಂಧಿಕರು ಸಮಾಧಾನಪಡಿಸುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬೆಂಕಿ ಹಚ್ಚಿಕೊಂಡು ತೀವ್ರ ಗಾಯಗೊಂಡಿದ್ದ ಯುವಕನನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.