ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೊಲೆ ಬೆದರಿಕೆ ಹಾಕಿ ಮಾನಹಾನಿ ಹೇಳಿಕೆ ನೀಡುತ್ತಿರುವ ಆರ್ ಎಸ್ ಎಸ್ ವಿರುದ್ದ ಮಂಡ್ಯದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಮಂಡ್ಯ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಂ ಎನ್ ಶಿವ ನಾಗರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಆರ್ ಎಸ್ ಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ನೈತಿಕ ಬೆಂಬಲ ನೀಡಲು ಯುವ ಕಾಂಗ್ರೆಸ್ ಸಂಪೂರ್ಣ ಶಕ್ತಿ ತುಂಬುತ್ತದೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಕೂಡಲೇ ಆರ್.ಎಸ್.ಎಸ್. ಅನ್ನು ಸರ್ಕಾರಿ ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆ ಮಾಡುವುದನ್ನು ನಿಲ್ಲಿಸುವಂತೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.
ನಗರಸಭಾ ಸದಸ್ಯ ಶ್ರೀಧರ, ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ನಿಂಗರಾಜು, ಪ್ರಧಾನ ಕಾರ್ಯದರ್ಶಿ ರಾಕೇಶ್, ಅವಿನಾಶ್, ತಾಲೂಕು ಅಧ್ಯಕ್ಷ ಸುನಿಲ್ ಕುಮಾರ್, ಗಾಂಧಿನಗರ ಚೇತನ್, ಸಲ್ಮಾನ್, ಪ್ರಕಾಶ್ ಮತ್ತಿತರರಿದ್ದರು.




