Saturday, May 18, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ‘ಯುವನಿಧಿ’ ನೋಂದಣಿಗೆ ಶಾಸಕ ನರೇಂದ್ರಸ್ವಾಮಿ ಚಾಲನೆ

ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಮಹತ್ವದ ಯುವನಿಧಿ ಯೋಜನೆಯ ನೋಂದಣಿಗೆ ಶಾಸಕ ಪಿಎಂ ನರೇಂದ್ರಸ್ವಾಮಿ ಚಾಲನೆ ನೀಡಿದರು.

ಮಳವಳ್ಳಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ‘ಯುವನಿಧಿ’ ಪೋಸ್ಟರ್ ಬಿಡುಗಡೆ ಮಾಡಿ ಚಾಲನೆ ನೀಡಿದ ಅವರು, ಪದವೀಧರ ಮತ್ತು ಡಿಪ್ಲೋಮಾ ಪದವೀಧರ ನಿರುದ್ಯೋಗಿಗಳಿಗೆ ಭತ್ಯೆ ನೀಡುವ ಯೋಜನೆ ಇದಾಗಿದ್ದು.ಕರ್ನಾಟಕ ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ, ಯುವಜನರನ್ನೇ ಗುರುಯಾಗಿರಿಸಿಕೊಂಡಿರುವ ಈ ಯೋಜನೆಯು ನಿರುದ್ಯೋಗಿ ಯುವಕರಿಗೆ ಆರ್ಥಿಕ ಸಹಾಯ ನೀಡಲಾಗಿದೆ ಎಂದು ತಿಳಿಸಿದರು.

ಪದವೀಧರ ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆಯ ನೆರವು ನೀಡುವ ನಮ್ಮ ಸರ್ಕಾರದ 5ನೇ ಗ್ಯಾರಂಟಿ “ಯುವನಿಧಿ” ಯೋಜನೆಯ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳಲಿದೆ. ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವಜನರು ಯೋಜನೆಗೆ ನೊಂದಾಯಿಸಿಕೊಳ್ಳುವ ಮೂಲಕ ಸದುಪಯೋಗ ಪಡೆಯಬೇಕು. ಆನ್ಲೈನ್ ಮೂಲಕ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಮೂಲಕ ಅರ್ಜಿ ಹಾಕಬಹುದು ಎಂದರು.

ಕಾರ್ಯಕ್ರಮದಲ್ಲಿ ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ, ತಹಸಿಲ್ದಾರ್ ಲೋಕೇಶ್, ತಾಲೂಕು ಪಂಚಾಯಿತಿ ಇ ಓ ಮಮತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!